Breaking News

ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ

Cnewstv.in / 18.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಜೊತೆಗೆ ತರಬೇತಿ ಭತ್ಯೆ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಭತ್ಯೆ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸಿದ್ದು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಪ್ರವರ್ಗವಾರು ನಿಗದಿಪಡಿಸಿದ ಗುರಿಗನುಗುಣವಾಗಿ ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಆಗಸ್ಟ್ 02 ಕಡೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಸವಚೇತನ ಬಿಲ್ಡಿಂಗ್, 100 ಅಡಿ ರಸ್ತೆ, ರವೀಂದ್ರನಗರ, ಶಿವಮೊಗ್ಗ ಜಿಲ್ಲೆ, ದೂ.ಸಂ: 08182-222129 ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಇದೇ ಕಚೇರಿಗೆ ಸಲ್ಲಿಸಬೇಕು.

ತರಬೇತಿ ಅವಧಿಯು 04 ವರ್ಷಗಳದ್ದಾಗಿದ್ದು, ಮಾಹೆಯಾನ ರೂ.4000 ಗಳ ತರಬೇತಿ ಭತ್ಯೆ ನೀಡಲಾಗುವುದು. ಪ್ರವರ್ಗ 2ಎ, 3ಎ ಮತ್ತು 3ಬಿ ಗಳಿಗೆ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ.2.50 ಲಕ್ಷ ಹಾಗೂ ಅಭ್ಯರ್ಥಿಯ ಗರಿಷ್ಟ ವಯೋಮಿತಿಯು ಪ್ರಕಟಣೆ ದಿನಾಂಕಕ್ಕೆ 30 ವರ್ಷಗಳನ್ನು ಮೀರಬಾರದು. ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಆದಾಯದ ಮಿತಿಯನ್ನು ನಿಗದಿಪಡಿಸಲಾಗಿದೆ. ಹಾಗೂ ಅಭ್ಯರ್ಥಿಯ ಗರಿಷ್ಟ ವಯೋಮಿತಿಯು 31 ವರ್ಷಗಳು ಮೀರಿರಬಾರದು. ತರಬೇತಿಗೆ ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪರೀಕ್ಷೆಯಲ್ಲಿ ತೇರ್ಗಡೆಯಾಗಿ 2 ವರ್ಷ ಅವಧಿಯ ಒಳಗಿರುವವರು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಬಾರ್ ಕೌನ್ಸಿಲ್‍ನಲ್ಲಿ ನೋಂದಣಿ ಮಾಡಿಸಿರಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=10539

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments