Breaking News

ಇನ್ನು ಮುಂದೆ ಮೂರು ವರ್ಷಕ್ಕೊಮ್ಮೆ ಪಿಡಿಓಗಳ ವರ್ಗಾವಣೆ ??

Cnewstv.in / 18.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಇನ್ನು ಮುಂದೆ ಮೂರು ವರ್ಷಕ್ಕೊಮ್ಮೆ ಪಿಡಿಓಗಳ ವರ್ಗಾವಣೆ ??

3 ವರ್ಷಕ್ಕೂ ಹೆಚ್ಚು ಕಾಲ ಒಂದೇ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುವ ಪಿಡಿಒಗಳನ್ನು ವರ್ಗಾವಣೆಗೆ ಕೋರಿಕೆ.

ಶಿವಮೊಗ್ಗ : 3 ವರ್ಷಕ್ಕೂ ಹೆಚ್ಚು ಕಾಲ ಒಂದೇ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುವ ಪಿಡಿಒಗಳನ್ನು ವರ್ಗಾವಣೆ ಮಾಡಲು ಕೋರಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೀವ್ ಗಾಂಧಿ ವಸತಿ ಯೋಜನೆ, ಇಂದಿರಾ ಆವಾಸ್ ವಸತಿ ಯೋಜನೆ ಸೇರಿದಂತೆ ಹಲವು ವಸತಿ ಯೋಜನೆಗಳಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಈಗಿರುವ ನಿಯಮಗಳು ಬಿಗಿಯಾಗಿದ್ದು, ಹಲವು ತಾಂತ್ರಿಕ ಕಾರಣಗಳಿಂದ ಪರಿಹಾರಧನ ಸರಿಯಾಗಿ ಸಿಗುತ್ತಿಲ್ಲ. ಈ ಬಗ್ಗೆ ಸಹಾಯಧನ ಹೆಚ್ಚಿಸುವುದರ ಜೊತೆಗೆ ಸರಿಯಾದ ಸಮಯಕ್ಕೆ ತಲುಪುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ.

ಫಲಾನುಭವಿಗಳಲ್ಲಿ ಅನೇಕರಿಗೆ ಮೊದಲ ಕಂತು ಬಿಡುಗಡೆಯಾಗಿದೆ. ಎರಡನೇ ಕಂತು ಬಿಡುಗಡೆಯಾಗಿಲ್ಲ. ಇದಕ್ಕೆ ಹಲವು ತಾಂತ್ರಿಕ ಕಾರಣಗಳಿವೆ. ದಾಖಲೆಗಳನ್ನು ಅಪ್ ಲೋಡ್ ಮಾಡಲು ಸಮಸ್ಯೆಯಾಗುತ್ತಿದೆ. ಪಿಡಿಒ ಜವಾಬ್ದಾರಿ ಹೆಚ್ಚಿರುತ್ತದೆ. ಈ ಪಿಡಿಒಗಳು ಫಲಾನುಭವಿಗಳಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಅಲೆದಾಡಿಸುತ್ತಾರೆ. ಈ ಬಗ್ಗೆಯೂ ಸರ್ಕಾರದ ಗಮನಸೆಳೆದಿದ್ದೇವೆ ಎಂದರು. 3 ವರ್ಷಕ್ಕೂ ಹೆಚ್ಚು ಕಾಲ ಒಂದೇ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುವ ಪಿಡಿಒಗಳನ್ನು ವರ್ಗಾವಣೆ ಮಾಡಲು ಕೋರಿದ್ದೇವೆ ಎಂದರು.

ಇದನ್ನು ಒದಿ : https://cnewstv.in/?p=10542

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*