Breaking News

ಮಹಾರಾಜ ಟ್ರೋಫಿ KSCA T20ಯಲ್ಲಿ ಶಿವಮೊಗ್ಗದ ತಂಡ.

Cnewstv.in / 19.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಹಾರಾಜ ಟ್ರೋಫಿ KSCA T20ಯಲ್ಲಿ ಶಿವಮೊಗ್ಗದ ತಂಡ.

ಶಿವಮೊಗ್ಗ : ಯುವ ಕ್ರಿಕೆಟಿಗರಿಗೆ ತಮ್ಮ ಪ್ರತಿಭೆಯನ್ನು ಪ್ರಕಟಿಸಲು ಅವಕಾಶ ನೀಡುವಲ್ಲಿ KSCA ಯಾವಾಗಲೂ ಮೊದಲ ಆದ್ಯತೆಯನ್ನು ನೀಡುತ್ತದೆ ಎಂದು ಅಂತಾರಾಷ್ಟ್ರೀಯ ಮಾಜಿ ಅಂಪೈರ್ ಹಾಗೂ KSCA ಜಂಟಿ ಕಾರ್ಯದರ್ಶಿ ಶವೀರ್ ತಾರಾಪೂರ್ ತಿಳಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ಬಾರಿ ಟೂರ್ನಿಯಲ್ಲಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ರಾಯಚೂರು ಮತ್ತು ಮಂಗಳೂರು ಸೇರಿದಂತೆ ಒಟ್ಟು 6 ತಂಡಗಳು ಪ್ರತಿಷ್ಠಿತ ಟ್ರೋಫಿಗಾಗಿ ಹೋರಾಟ ನಡೆಸಲಿವೆ. ಮೊದಲ ಹಂತದ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅಂಗಣದಲ್ಲಿ ನಡೆಯಲಿದೆ. ಮೈಸೂರಿನಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿದೆ. ಫೈನಲ್ ಸೇರಿಂದತೆ 16 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ ಎಂದರು.

ಮಹಾರಾಜ ಟ್ರೋಫಿ KSCA T20 ಯಲ್ಲಿ ಶಿವಮೊಗ್ಗ ಜಿಲ್ಲೆಯು ತನ್ನದೇ ಆದ ತಂಡವನ್ನು ಹೊಂದಲಿದೆ. ಪ್ರತಿಯೊಂದು ತಂಡವು ಆಯಾ ಪ್ರದೇಶದ ಇಬ್ಬರು ಆಟಗಾರರನ್ನು ಒಳಗೊಂಡಿರಬೇಕಾಗಿರುವುದರಿಂದ ಶಿವಮೊಗ್ಗದ ಆಟಗಾರರಿಗೆ ಟೂರ್ನಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಶಿವಮೊಗ್ಗ ವಲಯದ ಸಮನ್ವಯಕಾರ ಡಿಎಸ್ ಅರುಣ್ ಹೇಳಿದರು.

ಇದನ್ನು ಒದಿ : https://cnewstv.in/?p=10549

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*