ನೀತಿ ಸಂಹಿತೆ ಉಲ್ಲಂಘನೆ : ದ್ರೌಪದಿ ಮುರ್ಮು, ಸಿ.ಎಂ.ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು.
Cnewstv.in / 20.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನೀತಿ ಸಂಹಿತೆ ಉಲ್ಲಂಘನೆ : ದ್ರೌಪದಿ ಮುರ್ಮು, ಸಿ.ಎಂ.ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು.
ಬೆಂಗಳೂರು : ರಾಷ್ಟ್ರಪತಿ ಚುನಾವಣೆಯಲ್ಲಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಅರೋಪಿಸಿ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಬೆಂಗಳೂರಿನ ಐಷಾರಾಮಿ ಹೋಟೆಲ್ ನಲ್ಲಿ ಮತದಾರರಾದ ಶಾಸಕರಿಗೆ ಆಹಾರ, ಪಾನೀಯ, ಮನೋರಂಜನೆ ಹಾಗೂ ವಾಸ್ತವ್ಯದ ವ್ಯವಸ್ಥೆಯನ್ನು ಮಾಡಿ, ಅವರಿಗೆ ಲಂಚ ಹಾಗೂ ಇತರ ಅವಿಷವನ್ನು ನೀಡುವ ಮೂಲಕ ಪ್ರಭಾವ ಬೀರಿದ್ದಾರೆ ಎಂದು ಕಾಂಗ್ರೆಸ್ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ
ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಚುನಾವಣಾ ಅಪರಾಧ ಮಾಡಿರುವವರ ವಿರುದ್ಧ ಸೆಕ್ಷನ್ 171B, 171C, 171E, 171F ಪ್ರಕಾರ ಅವರ ವಿರುದ್ದ ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಇದನ್ನು ಒದಿ : https://cnewstv.in/?p=10565
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನೀತಿ ಸಂಹಿತೆ ಉಲ್ಲಂಘನೆ : ದ್ರೌಪದಿ ಮುರ್ಮು ಸಿ.ಎಂ.ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು. 2022-07-20