Breaking News

ರಾಜ್ಯಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆ.

Cnewstv.in / 20.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾಜ್ಯಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆ.

ಬೆಂಗಳೂರು : ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು,ಚಿಕ್ಕಿ ನೀಡಲು ಸರ್ಕಾರ ಸೂಚಿಸಿದೆ.‌

2022 – 23 ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯಲ್ಲಿ 1 ರಿಂದ 8 ನೇ ತರಗತಿಯ ಎಲ್ಲಾ ಫಲಾನುಭವಿ ವಿದ್ಯಾರ್ಥಿಗಳಿಗೆ ಪೂರಕ ಪೋಷಕಾಂಶ ಆಹಾರ ದಡಿಯಲ್ಲಿ ಮೊಟ್ಟೆ ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಶಾಲಾ ಮಕ್ಕಳಿಗೆ ವರ್ಷದ 100 ದಿನಗಳ ಕಾಲ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಶಿಕ್ಷಣ ಇಲಾಖೆ ಮನವಿ ಸಲ್ಲಿಸಿತ್ತು ಆದರೆ ಸರ್ಕಾರ 100 ದಿನದ ಬದಲಾಗಿ 46 ದಿನಗಳು ಮಾತ್ರ ವಿತರಿಸಲು ಒಪ್ಪಿಗೆಯನ್ನು ನೀಡಲಾಗಿದೆ.

ಮೊದಲು ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಿಗೆ ಮಾತ್ರ ಮೊಟ್ಟೆ ಯೋಜನೆ ರೂಪಿಸಲಾಗಿತ್ತು. ಇದೀಗ ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಮತ್ತು ಚಿಕ್ಕಿ ನೀಡಲಾಗುತ್ತದೆ.

ರಾಜ್ಯದಲ್ಲಿ 1 ರಿಂದ 8ನೇ ತರಗತಿಯಲ್ಲಿ 49 ಲಕ್ಷ ಶಾಲಾಮಕ್ಕಳಿದ್ದು, 100 ದಿನಗಳ ಕಾಲ ಅವರಿಗೆ ಮೊಟ್ಟೆ ಮತ್ತು ಚಿಕ್ಕಿ ವಿತರಿಸಲು ಸುಮಾರು 350 ಕೋಟಿ ವೆಚ್ಚವಾಗಲಿದೆ ಎಂದು ಆರ್ಥಿಕ ಇಲಾಖೆ ಅಂದಾಜಿಸಿದೆ.

ಇದನ್ನು ಒದಿ : https://cnewstv.in/?p=10577

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*