Breaking News

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಕೆ.ಎಸ್. ಈಶ್ವರಪ್ಪನವರಿಗೆ ಬಿಗ್ ರಿಲೀಫ್.

Cnewstv.in / 20.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಕೆ.ಎಸ್. ಈಶ್ವರಪ್ಪನವರಿಗೆ ಬಿಗ್ ರಿಲೀಫ್.

ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಬಿಗ್ ರಿಲೀಫ್ ದೊರೆತಿದೆ.

ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಉಡುಪಿ ನಗರ ಪೋಲಿಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಅದರೆ ಇದನ್ನು ಇನ್ನೂ ಕೋಟ್ ಅಂಗೀಕರಿಸಿಲ್ಲ. ಮುಂದಿನ ವಿಚಾರಣೆಯಲ್ಲಿ ದೂರುದಾರರು ಬಿ ರಿಪೋರ್ಟ್ ಗೆ ಚಾಲೆಂಜ್ ಮಾಡಬಹುದು ಆದರೆ ಸದ್ಯಕ್ಕೆ ಬಿ ರಿಪೋರ್ಟ್ ಸಿಕ್ಕಿರುವುದು ಈ ಪ್ರಕರಣದಲ್ಲಿ ಈಶ್ವರಪ್ಪನವರಿಗೆ ಮೊದಲ ಹಂತದ ರಿಲೀಫ್ ಸಿಕ್ಕಿದಂತಾಗಿದೆ.

ಅಭಿಮಾನಿಗಳು ಹಾಗೂ ಕುಟುಂಬದವರಿಂದ ಸಂಭ್ರಮಾಚರಣೆ..

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಿಂದ ಕುಟುಂಬಸ್ಥರಿಂದ ಸಂಭ್ರಮಾಚರಣೆ ಮಾಡಲಾಯಿತು. ಕುಟುಂಬಸ್ಥರು ಪರಸ್ಪರ ಸಿಹಿ ತಿನಿಸಿ ಖುಷಿಪಟ್ಟರು ಹಾಗೂ ಅಭಿಮಾನಿಗಳು ಈಶ್ವರಪ್ಪನವರ ಪರವಾಗಿ ಘೋಷಣೆಗಳನ್ನು ಕೂಗಿದರು.

ಇದನ್ನು ಒದಿ : https://cnewstv.in/?p=10579

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*