ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸವನ್ನು ಮಾಡ್ತೇನೆ – ರೇಖಾ ರಂಗನಾಥ್.
Cnewstv.in / 25.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸವನ್ನು ಮಾಡ್ತೇನೆ – ರೇಖಾ ರಂಗನಾಥ್.
ಶಿವಮೊಗ್ಗ : ಇಂದು ವಿರೋಧ ಪಕ್ಷದ ನಾಯಕಿಯಾಗಿ ಶ್ರೀಮತಿ ರೇಖಾ ರಂಗನಾಥ್ ಅಧಿಕಾರ ಸ್ವೀಕಾರ ಮಾಡಿದರು.
ಇಂದು ಪಾಲಿಕೆ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸವನ್ನು ಮಾಡ್ತೇನೆ. ಮಹಾನಗರಪಾಲಿಕೆ ವಿರೋಧ ಪಕ್ಷದ ನಾಯಕಿಯಾಗಿ ಅಧಿಕಾರ ಸ್ವೀಕರಿಸುವುದಕ್ಕೆ ಸಹಕಾರ ಮಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರು ಎಲ್ಲಾ ಮಹಾನಗರಪಾಲಿಕೆಯ ಸದಸ್ಯರಿಗೆ ಧನ್ಯವಾದಗಳು.
ಪಕ್ಷದ ನನಗೆ ನಂಬಿ ನೀಡಿರುವಂತಹ ಈ ಜವಾಬ್ದಾರಿಯನ್ನು ನಿಷ್ಠೆಯಿಂದ ಪ್ರಾಮಾಣಿಕವಾಗಿ ಮಾಡ್ತೇನೆ. ನನಗೆ ನೀಡಿರುವ ಈ ಸ್ಥಾನವನ್ನು ಅತ್ಯುತ್ತಮವಾಗಿ ಬಳಸಿಕೊಂಡು ಜನರ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನಿಟ್ಟಿನಲ್ಲಿ ದನಿಯಾಗುತ್ತೇನೆ.
ಏನೇ ಸಮಸ್ಯೆ ಇದ್ದರೂ ಕೂಡ ಜನರು ನನ್ನ ಬಳಿ ಹೇಳಿಕೊಳ್ಳಬಹುದು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಪಾಲಿಕೆ ವತಿಯಿಂದ ಜನರಿಗೆ ಸಿಗುವಂತ ಎಲ್ಲಾ ಸೌಲಭ್ಯಗಳನ್ನು ಅವರಿಗೆ ತಲುಪಿಸುವುದಕ್ಕೆ ನೇರವಾಗುತ್ತೇನೆ.
ಕುಡಿವ ನೀರಿನ ಸಮಸ್ಯೆ, ಮಂದಗತಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳು, ಬೀದಿದೀಪ, ಒಳಚರಂಡಿ ಸೇರಿದಂತೆ ಅನೇಕ ಸಮಸ್ಯೆಗಳಿದ್ದು ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರವೀಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಕೆ ಎಸ್ ಈಶ್ವರಪ್ಪ, ಮೇಯರ್ ಸುನಿತಾ ಅಣ್ಣಪ್ಪ, ಕಾಂಗ್ರೇಸ್ ಜಿಲ್ಲಾಧ್ಯಕ್ಷ ಎಚ್ ಎಸ್ ಸುಂದರೇಶ್, ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು,ಸ್ನೇಹಿತರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಇದನ್ನು ಒದಿ : https://cnewstv.in/?p=10627



ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸವನ್ನು ಮಾಡ್ತೇನೆ - ರೇಖಾ ರಂಗನಾಥ್. 2022-07-25