Breaking News

ಬಿಜೆಪಿ ಯುವ ಮೋರ್ಚಾ ಮುಖಂಡನ ಬರ್ಬರ ಹತ್ಯೆ.

Cnewstv.in / 27.07.2022 / ದಕ್ಷಿಣ ಕನ್ನಡ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬಿಜೆಪಿ ಯುವ ಮೋರ್ಚಾ ಮುಖಂಡನ ಬರ್ಬರ ಹತ್ಯೆ.

ಮಂಗಳೂರು : ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತನ ಹತ್ಯೆ ಮಾಡಲಾಗಿದೆ.

ಪ್ರವೀಣ್ ನೆಟ್ಟಾರು ಎಂಬ ಯುವಕನನ್ನು ಸುಳ್ಯ ತಾಲೂಕಿನ ಬೆಳ್ಳಾರೆ ಯಲ್ಲಿ ಹತ್ಯೆ ಮಾಡಲಾಗಿದೆ. ‌ ಕೋಳಿ ಅಂಗಡಿಯನ್ನ ನಡೆಸುತ್ತಿದ್ದ ಪ್ರವೀಣ್ ಇಂದು ರಾತ್ರಿ ಅಂಗಡಿ ಮುಚ್ಚಿ ಮನೆಗೆ ಹೋಗುವ ಸಂದರ್ಭದಲ್ಲಿ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.‌

ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ‌ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ್ ನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಒಂದು ವಾರದ ಹಿಂದೆಯಷ್ಟೇ ಬೆಳ್ಳಾರೆ ಸಮೀಪದಲ್ಲಿ ಮಸೂದ್ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಒಂದು ವಾರದ ಒಳಗಾಗಿ ಮತ್ತೊಂದು ಹತ್ಯೆಯಾಗಿದ್ದು ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಇದನ್ನು ಒದಿ : https://cnewstv.in/?p=10640

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*