Breaking News

ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಸ್ವಪ್ರೇರಿತ ಬಂದ್.‌

Cnewstv.in / 27.07.2022 / ದಕ್ಷಿಣ ಕನ್ನಡ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಸ್ವಪ್ರೇರಿತ ಬಂದ್.‌

ದಕ್ಷಿಣ ಕನ್ನಡ : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆ ಅವರ ಹತ್ಯೆ ಖಂಡಿಸಿ ಇಂದು ಉಪ್ಪಿನಂಗಡಿ, ಕಸಬ ಪುತ್ತೂರು ತಾಲೂಕಿನಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಹಿಂದುಪರ ಸಂಘಟನೆಗಳು ಕರೆ ನೀಡಿದೆ.

ಸದ್ಯ ಪುತ್ತೂರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಪ್ರವೀಣ್ ಹತ್ಯೆಮಾಡಿದ ಆರೋಪಿಗಳು ಬಳಸಿದ ಬೈಕ್ ನಂಬರ್ ಕೇರಳ ನೋಂದಣಿಯಾಗಿದೆ ಎಂದು ಪೋಲಿಸರು ಅನುಮಾನ ವ್ಯಕ್ತಪಡಿಸಿದ್ದು, ನಾಕಾಬಂದಿ ಹಾಕಿ ತಪಾಸಣೆ ನಡೆಸುತ್ತಿದ್ದಾರೆ.

ಪ್ರವೀಣ್ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.‌ ಆಸ್ಪತ್ರೆಯಿಂದ ಬೆಳ್ಳಾರೆವರೆಗೆ ಮೆರವಣಿಗೆ ಮೂಲಕ ಕರೆತರಲು ಸಂಘಟನೆಗಳು ನಿರ್ಧಾರಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸುಳ್ಯ, ಪುತ್ತೂರು, ಕಡಬ ತಾಲೂಕಿನಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

ಕೋಳಿ ಅಂಗಡಿಯನ್ನ ನಡೆಸುತ್ತಿದ್ದ ಪ್ರವೀಣ್ ‌ನೆನ್ನೆ ರಾತ್ರಿ ಅಂಗಡಿ ಮುಚ್ಚಿ ಮನೆಗೆ ಹೋಗುವ ಸಂದರ್ಭದಲ್ಲಿ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.‌ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ‌

ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ್ ನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ಮೃತಪಟ್ಟಿದ್ದಾರೆ. ಒಂದು ವಾರದ ಹಿಂದೆಯಷ್ಟೇ ಬೆಳ್ಳಾರೆ ಸಮೀಪದಲ್ಲಿ ಮಸೂದ್ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಇದನ್ನು ಒದಿ : https://cnewstv.in/?p=10646

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*