Breaking News

ಪ್ರವೀಣ್ ಹತ್ಯೆ ಪ್ರಕರಣ : ಬೆಳ್ಳಾರೆಯಲ್ಲಿ ಪೊಲೀಸರಿಂದ ಲಾಠಿ ಚಾರ್ಜ್.

Cnewstv.in / 27.07.2022 / ದಕ್ಷಿಣ ಕನ್ನಡ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಪ್ರವೀಣ್ ಹತ್ಯೆ ಪ್ರಕರಣ : ಬೆಳ್ಳಾರೆಯಲ್ಲಿ ಪೊಲೀಸರಿಂದ ಲಾಠಿ ಚಾರ್ಜ್.

ದಕ್ಷಿಣ ಕನ್ನಡ : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ರವರ ಮೃತದೇಹ ಅಂತಿಮ ದರ್ಶನದ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ

ನೂರಾರು ಹಿಂದೂಪರ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವ ಸುನಿಲ್ ಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸಿದ್ದರು, ಈ ವೇಳೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ನಳೀನ್ ಕುಮಾರ್ ಕಾರಿನ ಮೇಲೆ ಮುಗಿಬಿದ್ದರು. ಕಾರನ್ನು ಪಲ್ಟಿ ಮಾಡಲು ಸಹಾ ಯತ್ನಿಸಿದರು.

ಬೆಳ್ಳಾರೆ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಳ್ಳಲು ಆರಂಭಿಸುತ್ತಿದ್ದಂತೆ ಪೊಲೀಸರು ಲಘು ಲಾಠಿ ಪ್ರಹಾರವನ್ನು ನಡೆಸಿದರು. ಆಕ್ರೋಶಗೊಂಡ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.‌

ಇದನ್ನು ಒದಿ : https://cnewstv.in/?p=10652

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*