Breaking News

ಪ್ರವೀಣ್ ಹತ್ಯೆ ಪ್ರಕರಣ : 10 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು.

Cnewstv.in / 27.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಪ್ರವೀಣ್ ಹತ್ಯೆ ಪ್ರಕರಣ : 10 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು.

ಬೆಂಗಳೂರು : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ತುರ್ತು ಸಭೆಯನ್ನು ನಡೆಸಿದ ನಂತರ ಗೃಹಸಚಿವರ ಜ್ಞಾನೇಂದ್ರರವರು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 10 ಜನನ ವಶಕ್ಕೆ ಪಡೆಯಲಾಗಿದೆ.

ಪ್ರವೀಣ್ ಹತ್ಯೆಮಾಡಿದ ಆರೋಪಿಗಳು ಬಳಸಿದ ಗಾಡಿ ಕೇರಳ ನೊಂದಣಿಯಾಗಿದ್ದು, ಅದರ ಆಧಾರದ ಮೇಲೆ ಕೇರಳ ಪೊಲೀಸ್ ಮತ್ತು ಕರ್ನಾಟಕ ಪೊಲೀಸ್ ಜಂಟಿಯಾಗಿ ಕಾರ್ಯಾಚರಣೆಯಿಂದ ನಡೆಸುತ್ತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರನ್ನು ಸಹ ವಿಚಾರಣೆ ನಡೆಸಲಾಗುತ್ತಿದ್ದು ಶೀಘ್ರವೇ ಹತ್ಯೆ ಆರೋಪಿಗಳನ್ನು ಬಂಧಿಸಲಾಗುವುದು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಮನವಿ ಮಾಡಿದರು.

ಇದನ್ನು ಒದಿ : https://cnewstv.in/?p=10655

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*