Cnewstv.in / 27.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು.. ಬಿಜೆಪಿ ಯುವ ಮೋರ್ಚಾದಿಂದ ಸಾಮೂಹಿಕ ರಾಜೀನಾಮೆ.
ಬೆಂಗಳೂರು : ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ ಯುವಮೋರ್ಚಾ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ಇಲ್ಲದ ಸರ್ಕಾರ ಎಂದು ಆರೋಪಿಸಿದ್ದಾರೆ.
ಬಾಗಲಕೋಟೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅನಂದ, ಪ್ರಧಾನ ಕಾರ್ಯದರ್ಶಿ ಸೇರಿದಂತೆ 12 ಮಂಡಲಗಳ ಪದಾಧಿಕಾರಿಗಳು, ಕಾರ್ಯಕರ್ತರುಗಳು ರಾಜೀನಾಮೆ ನೀಡಿದ್ದು, ಬಾಗಲಕೋಟೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಶೃಂಗೇರಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಸುನಿಲ್ ಸಂಪೆಕೊಳಲು ಎಂಬಾತ ರಾಜೀನಾಮೆ ನೀಡಿದ್ದು, ನಾನು ಹಿಂದೂ ಪರ ಹೋರಾಟಗಾರ ನಕಲಿ ಹಿಂದೂ ಪರ ಹೋರಾಟಗಾರ ಎಂದಿದ್ದಾರೆ.
ಬೆಂಗಳೂರು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣದ ಸಂಚಾಲಕರು ಶ್ರೀನಿವಾಸಗೌಡ ಎಂಬಾತನು ಇಂದಿನಿಂದ ಎಲ್ಲಾ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಘೋಷಣೆ ಮಾಡಿದ್ದಾರೆ.
ಇದನ್ನು ಒದಿ : https://cnewstv.in/?p=10658
C News TV Kannada News Online in cnewstv