ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ವತಿಯಿಂದ ಬೃಹತ್ ಮರೆವಣಿಗೆ..
Cnewstv.in / 30.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ವತಿಯಿಂದ ಬೃಹತ್ ಮರೆವಣಿಗೆ..
ಶಿವಮೊಗ್ಗ : ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳನ್ನೊಳಗೊಂಡಂತೆ ಕೇಂದ್ರದ ಹಿಂದುಳಿದ ವರ್ಗಗಳ (OBC) ಪಟ್ಟಿಯಲ್ಲಿ ಸೇರಿಸುವಂತೆ ಕೋರಿ ಶಿವಮೊಗ್ಗದ ಬಸವೇಶ್ವರ ವೃತ್ತದಲ್ಲಿನ ಬಸವ ಪ್ರತಿಮೆ ಬಳಿ ಬೆಳಿಗ್ಗೆ 11.00 ಗಂಟೆಗೆ ಸರಿಯಾಗಿ ಸೇರಿ, ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ಹೋಗಿ ಮನವಿ ಸಲ್ಲಿಸಲಾಗುವುದು ಎಂದು ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವಸತಿಯಿಂದ ತಿಳಿಸಲಾಯಿತು.
ವೀರಶೈವ ಲಿಂಗಾಯತ ಮಹಾಸಭಾ ಬೆಂಗಳೂರು ಇವರ ನಿರ್ದೇಶನದಂತೆ ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳನ್ನೊಳಗೊಂಡಂತೆ ಕೇಂದ್ರದ ಹಿಂದುಳಿದ ವರ್ಗಗಳ (OBC) ಪಟ್ಟಿಯಲ್ಲಿ ಸೇರಿಸುವಂತೆ ಕೋರಿ ರಾಜ್ಯದ ಎಲ್ಲಾ ಜಿಲ್ಲೆಗಳು ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ.
ಆಗಸ್ಟ್ 1 ರಂದು ಸಂವಿಧಾನದ 15(4) ಮತ್ತು 16 (4)ರ ಅನುಚ್ಛೇದಗಳಲ್ಲಿ ಇತರ ಹಿಂದುಳಿದ ವರ್ಗಗಳ ಮೀಸಲಾತಿಗೆ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಸರ್ಕಾರ ವೀರಶೈವ ಲಿಂಗಾಯತ ಸಮುದಾಯಗಳನ್ನು ಹಿಂದುಳಿದ ಪಟ್ಟಿಯಲ್ಲಿ ಸೇರಿಸಿದ್ದರೂ, ಕೇಂದ್ರ ಸರ್ಕಾರ ಮಾತ್ರ ನಮ್ಮ ಸಮುದಾಯದ ಎಲ್ಲ ಪಂಗಡಗಳನ್ನು ಹಿಂದುಳಿದ ಪಟ್ಟಿಗೆ ಸೇರಿಸಿರುವುದಿಲ್ಲ.
ಇದರಿಂದಾಗಿ ವೀರಶೈವ ಲಿಂಗಾಯತ ಸಮುದಾಯಗಳ ಪ್ರತಿಭಾವಂತ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಅಖಿಲ ಭಾರತ ಸೇವೆಯಲ್ಲಿ (IAS, IPS, IRS, IFS) ಕೇಂದ್ರದ ಸಾರ್ವಜನಿಕ ಉದ್ದಿಮೆಗಳಲ್ಲಿ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮತ್ತು (UPSC, SSC, RRB) ಮುಖಾಂತರ ನಡೆಯಿಸುವ ಉದ್ಯೋಗಗಳಿಂದ ವಂಚಿತರಾಗಿರುತ್ತಾರೆ.
ಹಾಗೆಯೇ ವಿದ್ಯಾಲಯಗಳ, Done. (IIT, IIM, NIT, AIIMS) x (NEET, JEE, AIEE) ಇಂಜಿನಿಯರಿಂಗ್ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ನಡೆಯಿಸುವ ಅರ್ಹತಾ ಪರೀಕ್ಷೆಗಳಲ್ಲಿ ನಮ್ಮ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಆದ್ದರಿಂದ ವೀರಶೈವ – ಲಿಂಗಾಯತ ಒಟ್ಟು ಸಮುದಾಯಗಳನ್ನು ಕೇಂದ್ರದ ಹಿಂದುಳಿದ ಪಟ್ಟಿಯಲ್ಲಿ ಸೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿ್ರಿಸಲಾಗಿದೆ.
ಇದನ್ನು ಒದಿ : https://cnewstv.in/?p=10683
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ವತಿಯಿಂದ ಬೃಹತ್ ಮರೆವಣಿಗೆ.. 2022-07-30