Breaking News

ಮುರುಘಾ ಮಠಕ್ಕೆ ಭೇಟಿ ನೀಡಿ, ಲಿಂಗ ದೀಕ್ಷೆ ಪಡೆದ ರಾಹುಲ್ ಗಾಂಧಿ.

Cnewstv.in / 03.08.2022 / ಚಿತ್ರದುರ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮುರುಘಾ ಮಠಕ್ಕೆ ಭೇಟಿ ನೀಡಿ, ಲಿಂಗ ದೀಕ್ಷೆ ಪಡೆದ ರಾಹುಲ್ ಗಾಂಧಿ.

ಚಿತ್ರದುರ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.

ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲಿರುವ ರಾಹುಲ್ ಗಾಂಧಿಯವರು ಇಂದು ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ 20ಕ್ಕೂ ಹೆಚ್ಚು ಮಠಾಧೀಶರನ್ನು ಭೇಟಿಯಾಗಿದ್ದರು.
ಮುರುಘಾಮಠದಲ್ಲಿ ಶ್ರೀಗಳಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಿಂಗ ದೀಕ್ಷೆ ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯವರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಶಾಸಕ ಟಿ.ರಘುಮೂತಿ ಉಪಸ್ಥಿತರಿದ್ದರು. ರಾಹುಲ್ ಗಾಂಧಿ ಭೇಟಿ ಹಿನ್ನೆಲೆ ಮುರುಘಾಮಠದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಇದನ್ನು ಒದಿ : https://cnewstv.in/?p=10702

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*