Breaking News

ವರಮಹಾಲಕ್ಷ್ಮಿ ವತ್ರ ಆಚರಣೆಯ ವಿಧ..

Cnewstv.in / 05.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ವರಮಹಾಲಕ್ಷ್ಮಿ ವತ್ರ ಆಚರಣೆಯ ವಿಧ..

ನಿಜಶ್ರಾವಣ ಶುಕ್ಲಪೂರ್ಣಿಮೆ ದಿವಸ ಶುಕ್ರಗ್ರಹವು ಪೂರ್ವದಲ್ಲಿ ಬೆಳಗುತ್ತಿರುವ ಸಮಯದಲ್ಲಿ, ಅರ್ಥಾತ್ ಶುಕ್ರವಾರ, ಅಥವಾ ಶುಕ್ಲಪೂರ್ಣಿಮೆಯ ಅತಿಹತ್ತಿರದ ಶುಕ್ರವಾರದಂದು, ವರಲಕ್ಷ್ಮೀ ಆರಾಧನೆ ಮಾಡಬೇಕು ಎಂಬ ಶಾಸ್ತ್ರವಿಧಿ ಇದೆ. ಕಾರಣಾಂತರಗಳಿಂದ ಆ ದಿನದಂದು ವ್ರತವನ್ನು ಮಾಡಲಾಗದಿದ್ದವರು ನವರಾತ್ರಿಯ ಶುಕ್ರವಾರದಂದು ಮಾಡಬಹುದು.

“ದ್ವಾದಶಗ್ರಂಥಿ ಸಂಯುಕ್ತಂ ಕೃತಂ ದ್ವಾದಶತಂತುಭಿ:
ಧಾರಯಾಮಿ ಮಹಾದೇವಿ ಸೂತ್ರಂ ತೇ ಸರ್ವಮಂಗಳೇ”

ಶುಕ್ರವಾರದ ದಿನ, ಸಾಯಂಕಾಲದವರೆವಿಗೂ ಉಪವಾಸ ಇರಬೇಕು. ವ್ರತ ಮಾಡುವವರು ಸಂಕಲ್ಪ ಮಾಡಿ ದೇವಿಯನ್ನು ಕಲಶ ಮತ್ತು ವಿಗ್ರಹಗಳಲ್ಲಿ ಆವಾಹನೆ ಮಾಡಿ ಪೂಜಿಸುವರು. ಕಲಶದಲ್ಲಿ ಅಕ್ಕಿ ತುಂಬಿಸಿ ಖರ್ಜೂರ, ಗೋಡಂಬಿ,ದ್ರಾಕ್ಷಿ, ಬಾದಾಮಿ, ಕಲ್ಲುಸಕ್ಕರೆ ಮತ್ತು ಕೆಲವು ಹಣ್ಣುಗಳನ್ನು ಇರಿಸುವರು. ಈ ಕಳಸಕ್ಕೆ ಲಕ್ಷ್ಮೀ ಕಳಸ ಎನ್ನುತ್ತಾರೆ.

ಅದರ ಮೇಲೆ ಚಿನ್ನ ಅಥವಾ ಬೆಳ್ಳಿಯಿಂದ ತಯಾರಿಸಿದ ಮುಖವಾಡವನ್ನಿಟ್ಟು ಅಥವಾ ತೆಂಗಿನಕಾಯಿಗೆ ಹಳದಿಯ ಹಿಟ್ಟಿನಿಂದ ಮೂಗು ಕಣ್ಣು ಕಿವಿ ಮಾಡಿ, ಒಡವೆಗಳನ್ನು ಏರಿಸಿ, ಸೀರೆ ಉಡಿಸಿ, ಅಲಂಕಾರ ಮಾಡಲಾಗುತ್ತದೆ. ಈ ಪೂಜೆಯಲ್ಲಿ ವಿಶೇಷವಾದ ದಾರಗಳಿಗೆ ಪೂಜೆಯನ್ನು ಸಲ್ಲಿಸುವರು. ಈ ದಾರವನ್ನು ದೋರವೆಂದು ಕರೆವರು. ಹೊಸದಾದ ೧೨ ದಾರಗಳಿಗೆ ೧೨ ಗಂಟುಗಳನ್ನು ಹಾಕಿ, ಅದನ್ನು ಸ್ವಲ್ಪ ನೀರಿನಲ್ಲಿ ನೆನೆಸಿ ಅರಿಶಿನ ಹಚ್ಚಿ ದೇವಿಯ ಪಕ್ಕದಲ್ಲಿರಿಸಿ ಆರಾಧಿಸಿ ಪೂಜಿಸುವರು.

ಈ ದಾರಗಳಿಗೆ ಅರಿಶಿನ, ಕುಂಕುಮ, ಹೂವು, ಪತ್ರೆಗಳಿಂದ ಪೂಜಿಸಿ, ನೈವೇದ್ಯ ಮಾಡುವರು. ಹನ್ನೆರಡು ಹೆಸರುಗಳನ್ನು ಉಚ್ಚರಿಸಿ ದ್ವಾದಶನಾಮಾವಳಿಯೆಂದು ಪೂಜಿಸುವರು. ಆ ನಾಮಾವಳಿಗಳು ಹೀಗಿವೆ -ರಮೆ, ಸರ್ವಮಂಗಳೆ, ಕಮಲವಾಸಿನೆ, ಮನ್ಮಥಜನನಿ, ವಿಷ್ಣುವಲ್ಲಭೆ, ಕ್ಷೀರಾಬ್ಧಿಕನ್ಯಕೆ, ಲೋಕಮಾತೆ, ಭಾರ್ಗವಿ, ಪದ್ಮಹಸ್ತೆ, ಪುಷ್ಪೆ, ತುಷ್ಟೆ ಮತ್ತು ವರಲಕ್ಷ್ಮಿ. ಈ ದಾರಕ್ಕಾಗಿ ವಿಶೇಷವಾದ ನೈವೇದ್ಯವಾದ ಸಜ್ಜಪ್ಪವನ್ನು ಅರ್ಪಿಸುವರು. ಅಂದು ಶ್ರೀಸೂಕ್ತವನ್ನು ಪಠಿಸುವುದೂ ಒಳ್ಳೆಯದು.

ದೇವಿಯ ಮೂರ್ತಿಗೂ ಅರಿಶಿನ, ಕುಂಕುಮ,ಹೂವು, ಪತ್ರೆ ಮತ್ತು ಅಕ್ಷತೆಯಿಂದ ಪೂಜೆಯನ್ನು ಸಲ್ಲಿಸಿದ ಬಳಿಕ, ಪೂಜಿಸಿದ ಹೆಣ್ಣುಮಕ್ಕಳು ಆ ದಾರಗಳಿಗೆ ಹೂವನ್ನು ಕಟ್ಟಿ, ಹಿರಿಯರಿಂದ ಕಂಕಣದಂತೆ ಬಲಗೈಗೆ ಕಟ್ಟಿಸಿಕೊಳ್ಳುವರು. ಹಾಗೆ ಕಟ್ಟಿಸಿಕೊಂಡ ನಂತರ ಆ ಹಿರಿಯರಿಗೆ ನಮಸ್ಕರಿಸಿ ದಕ್ಷಿಣೆಯೊಂದಿಗೆ ದಾನವನ್ನು ಕೊಡುವರು. ಈ ಸಮಯದಲ್ಲಿ ಹೇಳುವ ಶ್ಲೋಕ ಹೀಗಿದೆ.

ಇದನ್ನು ಒದಿ : https://cnewstv.in/?p=10732

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments