Breaking News

ಲಿಂಗನಮಕ್ಕಿ ಜಲಾಶಯ : ಮುನ್ನೆಚ್ಚರಿಕೆ ಸೂಚನೆ.

Cnewstv.in / 06.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಲಿಂಗನಮಕ್ಕಿ ಜಲಾಶಯ : ಮುನ್ನೆಚ್ಚರಿಕೆ ಸೂಚನೆ.

ಶಿವಮೊಗ್ಗ : ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗಮಕ್ಕಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೇ ದಿನೇ ಏರುತ್ತಿದೆ.

ಜಲಾಶಯದ ಗರಿಷ್ಟ ಮಟ್ಟ 1819.00 ಅಡಿಗಳಾಗಿದ್ದು ದಿ: 06-08-2022 ರ ಬೆಳಿಗ್ಗೆ 8 ಗಂಟೆಗೆ ಜಲಾಶಯದ ನೀರಿನ ಮಟ್ಟ 1801.35 ಅಡಿಗಳಾಗಿರುತ್ತದೆ. ಈ ದಿನದ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 30,000 ಕ್ಯೂಸೆಕ್ಸ್‍ಗಳಿಗಿಂತಲೂ ಅಧಿಕವಾಗಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಟ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ.

ಅಣೆಕಟ್ಟೆಯ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು. ಆದ್ದರಿಂದ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕೆಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=10739

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*