ಎರಡು ಗುಂಪುಗಳ ನಡುವೆ ಮಾರಾಮಾರಿ, ಇಬ್ಬರ ಸಾವು.
Cnewstv.in / 11.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಎರಡು ಗುಂಪುಗಳ ನಡುವೆ ಮಾರಾಮಾರಿ ಇಬ್ಬರ ಸಾವು.
ಕೊಪ್ಪಳ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ 9 ಗಂಟೆಯ ವೇಳೆಗೆ ಗಲಾಟೆ ನಡೆದಿದ್ದು, ನಂತರ ಅದು ಹಿಂಸಾಚಾರಕ್ಕೆ ತಿರುಗಿದೆ. ಮೃತರನ್ನು ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದ ಯಂಕಪ್ಪ ತಳವಾರ್ ಮತ್ತು ಭಾಷಾ ಸಾಬ್ ಎಂದು ಗುರುತಿಸಲಾಗಿದೆ. ಧರ್ಮಣ್ಣ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮದಲ್ಲಿ ಕಲ್ಲು ತೂರಾಟ ನಡೆದಿದ್ದು, ಹಲವು ಬೈಕ್ ಜಖಂ ಅಗಿದೆ. ಹುಲಿಹೈದ ಗ್ರಾಮದಲ್ಲಿ ಸೆಕ್ಷನ್ 144 ಜಾರಿ ಮಾಡಿದ್ದು, ಅಗಸ್ಟ್ 20 ರವರೆಗೆ ಜಾರಿಯಲ್ಲಿರುತ್ತದೆ. ಗ್ರಾಮದ ಸುತ್ತಮುತ್ತ 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರು ಗುಂಪು ಸೇರುವುದು ನಿಷೇಧಿಸಲಾಗಿದೆ. ನೂರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಬಿಗಿಬಂದೋಬಸ್ತ್ ಮಾಡಲಾಗಿದೆ.
ಇದನ್ನು ಒದಿ : https://cnewstv.in/?p=10783
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಎರಡು ಗುಂಪುಗಳ ನಡುವೆ ಮಾರಾಮಾರಿ ಇಬ್ಬರ ಸಾವು. 2022-08-11