ಕರಾವಳಿ, ಮಲೆನಾಡು ಭಾಗದಲ್ಲಿಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ.
Cnewstv.in / 13.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕರಾವಳಿ, ಮಲೆನಾಡು ಭಾಗದಲ್ಲಿಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ.
ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿತ್ತು, ಆದರೆ ಇದೀಗ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮತ್ತೆ ಮೂರು ದಿನ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗೆ ಅತ್ಯಂತ ಭಾರಿ ಮಳೆಯ ರೆಡ್ ಅಲರ್ಟ್ ಇರಲಿದೆ.
ಇದೇ ಅವಧಿಯಲ್ಲಿ ಯಾದಗಿರಿ, ಬೀದರ್, ಕಲಬುರಗಿಗೆ ಭಾರಿ ಮಳೆಯ ಆರೆಂಜ್ ಅಲರ್ಟ್, ರಾಯಚೂರು, ವಿಜಯಪುರ, ಬೆಳಗಾವಿ, ದಾವಣಗೆರೆ, ರಾಮನಗರ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಇದನ್ನು ಒದಿ : https://cnewstv.in/?p=10806
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕರಾವಳಿ ಮಲೆನಾಡು ಭಾಗದಲ್ಲಿಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ. 2022-08-13