Breaking News

ಸಾರ್ವರ್ಕರ್ ಫ್ಲೆಕ್ಸ್ ವಿವಾದ, ನಡೆದದ್ದು ಏನು ??

Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸಾರ್ವರ್ಕರ್ ಫ್ಲೆಕ್ಸ್ ವಿವಾದ, ನಡೆದದ್ದು ಏನು ??

ಶಿವಮೊಗ್ಗ : ಇಂದು ಮಧ್ಯಾಹ್ನ ಮತ್ತೆ ನಗರದ ಅಮೀರ್ ಅಹಮದ್ ವೃತ್ತದಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ವಿವಾದಕ್ಕೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಅಮೀರ್ ಅಹ್ಮದ್ ವೃತ್ತದಲ್ಲಿ ಸಾವರ್ಕರ ಫ್ಲೆಕ್ಸ್ ಹಾಕಲಾಗಿತ್ತು. ಮುಸ್ಲಿಂ ಸಮುದಾಯದ ಯುವಕರ ಗುಂಪೊಂದು ಫ್ಲೆಕ್ಸ್ ಹಾಕಿದ ಸ್ಥಳದಲ್ಲಿ ಟಿಪ್ಪುಸುಲ್ತಾನ್ ಫೋಟೋ ಹಾಕಲು ಮುಂದಾಗಿದೆ. ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿಯಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

ಈ ವೇಳೆ ವೃತ್ತದೊಳಗೆ ನುಗ್ಗಿದ ಕೆಲವು ಕಿಡಿಗೇಡಿಗಳು ಸಾವರ್ಕರ್ ಫ್ಲೆಕ್ಸ್ ತೆರವು ಮಾಡಿದ್ದಾರೆ. ಕೂಡಲೇ ಪೊಲೀಸರು ಲಾಠಿ ಪ್ರಹಾರವನ್ನು ಮಾಡಿ ಫೇಕ್ಸ್ ತೆಗೆದವರನ್ನು ವಶಕ್ಕೆ ಪಡೆದಿದ್ದಾರೆ. ಇದಕ್ಕೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಮತ್ತೆ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಕಟ್ಟಬೇಕು ಎಂದು ಪಟ್ಟು ಹಿಡಿದ ಧರಣಿ ಆರಂಭಿಸಿದರು.

ಶಿವಮೊಗ್ಗ ನಗರಾದ್ಯಂತ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅಮೀರ್ ಅಹ್ಮದ್ ವೃತ್ತಕ್ಕೆ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇದನ್ನು ಒದಿ : https://cnewstv.in/?p=10832

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*