Breaking News

ಹತೋಟಿಗೆ ಬಂದ ಶಿವಮೊಗ್ಗ ನಗರದ ಪರಿಸ್ಥಿತಿ

Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಹತೋಟಿಗೆ ಬಂದ ನಗರದ ಪರಿಸ್ಥಿತಿ

ಶಿವಮೊಗ್ಗ : ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನತೆಗೆ ತಿರುಗಿತ್ತು ಅದರೆ ಸದ್ಯ ಪರಿಸ್ಥಿತಿ ಶಾಂತವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಸೆಕ್ಷನ್ ‌144 ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ನಗರದ ಪ್ರಮುಖ ರಸ್ತೆಗಳಾದ ಗಾಂಧಿಬಜಾರ್, B.H ರಸ್ತೆ, MKK ರಸ್ತೆ, OT ರಸ್ತೆ, ನೆಹರು ರಸ್ತೆಗಳ‌ ಅಂಗಡಿ-ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ದೌಡಾಯಿಸಿದ್ದು ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

ಇದನ್ನು ಒದಿ : https://cnewstv.in/?p=10841

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*