ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ.
Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ.
ಶಿವಮೊಗ್ಗ : ನಿಷೇಧಾಜ್ಞೆ ಹಿನ್ನೆಲೆ ಇಂದು ನಡೆಯಬೇಕಿದ್ದ ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ.
ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ನಾಳೆ ನಡೆಯಬೇಕಾಗಿದ್ದ ಎಂಎಸ್ಸಿ (ಹಾನರ್ಸ್) ಮತ್ತು ಪಿಎಚ್ ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಕೆ. ನವೀನ್ ಕುಮಾರ್ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=10853
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ. 2022-08-16