Breaking News

ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ.. ಅರೋಪಿಯ ಬಂಧನ.

Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ. ಅರೋಪಿಯ ಬಂಧನ.

ಶಿವಮೊಗ್ಗ : ಸಾವರ್ಕರ್ ಫ್ಲಕ್ಸ್ ವಿಚಾರ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಲ್ಲಿ ನಿಷೇಧಾಜ್ಙೆ ಜಾರಿಯಲ್ಲಿದೆ. ಇದರ ಮಧ್ಯ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.

ಹಲ್ಲೆಗೊಳಗಾದವನನ್ನು ಸುನಿಲ್ ಎಂದು ಗುರುತಿಸಲಾಗಿದ್ದು ಇವನಿಗೂ ಹಾಗೂ ಭದ್ರಾವತಿಯ ನೆಹರೂ ನಗರದ ಡಿಚ್ಚಿ ಮುಬಾರಕ್ (26) ಎಂಬುವನ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮುಬಾರಕ್ ಸುನೀಲ್ ಗೆ ಚಾಕುವಿನಿಂದ ಇರಿಯಲು ಮುಂದಾಗಿದ್ದು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾನೆ.‌

ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,‌ ಸುನೀಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನು ಒದಿ : https://cnewstv.in/?p=10871

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*