Breaking News

ಗಲಭೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು.

Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಗಲಭೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು.

ಶಿವಮೊಗ್ಗ : ನಿನ್ನೆ ನಗರದಲ್ಲಿ ಹಲ್ಲೆಗೊಳಗಾದ ಯುವಕ ಪ್ರೇಮ್ ಸಿಂಗ್ ಮತ್ತು ಸದ್ದಾಂ ನನ್ನು ಇಂದು ಶಿವಮೊಗ್ಗ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಮತ್ತು ಪಾಲಿಕೆಯ ಕಾಂಗ್ರೆಸ್ ಪಕ್ಷದ ಸದಸ್ಯರು ಮೆಗ್ಗನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಮೆಗ್ಗನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಶ್ರೀಧರ್ ಅವರ ಬಳಿ ಯುವಕರ ಆರೋಗ್ಯದ ಮಾಹಿತಿಯನ್ನು ಪಡೆದು ನಂತರ ಆ ಯುವಕರಿಗೆ ಹಾಗೂ ಅವರ ಕುಟುಂಬದವರಿಗೆ ಆತ್ಮಸ್ಥೈರ್ಯವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಬಿ.ಎ ರಮೇಶ್ ಹೆಗ್ಡೆ, ಕೆ ರಂಗನಾಥ್ ,ರಂಗೇಗೌಡ, ಹೆಚ್.ಪಿ. ಗಿರೀಶ್ , ಎಸ್ ಕುಮಾರೇಶ್ ಇತರರು ಉಪಸ್ಥಿತರಿದ್ದರು.

ಇದನ್ನು ಒದಿ : https://cnewstv.in/?p=10875

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*