ಹಿಂದೂ ಮಹಾಸಭಾ ಗಣಪತಿ ಸಮಿತಿ ಪ್ರಮುಖರೊಂದಿಗೆ ಎಡಿಜಿಪಿ ಅಲೋಕ್ ಕುಮಾರ್ ಚರ್ಚೆ..
Cnewstv.in / 17.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹಿಂದೂ ಮಹಾಸಭಾ ಗಣಪತಿ ಸಮಿತಿ ಪ್ರಮುಖರೊಂದಿಗೆ ಎಡಿಜಿಪಿ ಅಲೋಕ್ ಕುಮಾರ್ ಚರ್ಚೆ..
ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಸಮಿತಿಯ ಪ್ರಮುಖರೊಂದಿಗೆ ಇಂದು ಎಡಿಜಿಪಿ ಅಲೋಕ್ ಕುಮಾರ್ ಚರ್ಚೆ ನಡೆಸಿದರು.
ಸ್ವತಂತ್ರೋತ್ಸವದ ಸಂಭ್ರಮದ ದಿನವೇ ಉಂಟಾದ ಗಲಭೆ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ಎಡಿಜಿಪಿ ಅಲೋಕ್ ಕುಮಾರ್ ಅವರು, ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಇನ್ನೇನು ಕೆಲವೇ ದಿನಗಳಲ್ಲಿ ಗಣಪತಿ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಶಿವಮೊಗ್ಗದ ಹಿಂದು ಮಹಾಸಭಾ ಗಣಪತಿ
ಪ್ರತಿಷ್ಠಾಪನಾ ಸ್ಥಳ ಹಾಗೂ ಕೋಟೆ ಭೀಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು ಹಾಗೂ ಪ್ರಮುಖ ಮಾಹಿತಿಗಳನ್ನು ಪಡೆದರು.
ಯಾರೋ ಕಿಡಿಗೇಡಿಗಳಿಂದ ಇದೇ ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗ ವಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲಾ ಸಮುದಾಯದವರು ಅಂತಹವರ ಬಗ್ಗೆ ಎಚ್ಚರವಹಿಸಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲರೂ ಸೇರಿ ಶಾಂತಿ ಸೌಹಾರ್ದತೆಯನ್ನು ಕಾಪಾಡಬೇಕು ಎಂದರು.