ಸಿದ್ದರಾಮಯ್ಯನವರಿಗೆ ಕಪ್ಪುಬಾವುಟ ಪ್ರದರ್ಶಿಸಿ ಸ್ವಾಗತ ಮಾಡಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು.
Cnewstv.in / 18.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸಿದ್ದರಾಮಯ್ಯನವರಿಗೆ ಕಪ್ಪುಬಾವುಟ ಪ್ರದರ್ಶಿಸಿ ಸ್ವಾಗತ ಮಾಡಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು.
ಕೊಡಗು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಸ್ವಾಗತ ಮಾಡಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ವಿಧಾನಸಭಾ ವಿಪಕ್ಷನಾಯಕ ಸಿದ್ದರಾಮಯ್ಯನವರು ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕೆಂದು ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೊಡಗಿನ ಗಡಿಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಕಾರ್ಯಕರ್ತರು ಸಾರ್ವರ್ಕರ್ ಭಾವಚಿತ್ರವನ್ನು ತೋರಿಸಿ, ಕಪ್ಪು ಬಾವುಟ ಪ್ರದರ್ಶನ ಮಾಡಿ, ಘೇರಾವ್ ಹಾಕಿದರು. ಗೋ ಬ್ಯಾಕ್ ಸಿದ್ದರಾಮಯ್ಯ ಎಂದು ಘೋಷಣೆಗಳನ್ನು ಕೂಗಿದರು. ಇತ್ತ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯನವರಿಗೆ ಅದ್ದೂರಿ ಸ್ವಾಗತವನ್ನು ಕೋರಿದರು.
ಇದನ್ನು ಒದಿ : https://cnewstv.in/?p=10898
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸಿದ್ಧರಾಮನಿಗೆ ಕಪ್ಪುಬಾವುಟ ಪ್ರದರ್ಶಿಸಿ ಸ್ವಾಗತ ಮಾಡಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು. 2022-08-18