Breaking News

ಶಾಲಾ ಬಸ್ ಅಪಘಾತ, ಇಬ್ಬರ ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ.

Cnewstv.in / 20.8.2022 / ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಾಲಾ ಬಸ್ ಅಪಘಾತ, ಇಬ್ಬರ ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ.

ಬೆಳಗಾವಿ : ಶಾಲಾ ಬಸ್ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿ ಎರಡೂ ವಾಹನಗಳ ಚಾಲಕರು ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

50ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಬಸ್ ನಲ್ಲಿ 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಥಣಿ ಪೊಲೀಸರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲು ನೆರವಾದರು.ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬಗ್ಗೆ ಇನ್ನಷ್ಟು ಮಾಹಿತಿ ಬರಬೇಕಿದೆ.

ಇದನ್ನು ಒದಿ : https://cnewstv.in/?p=10917

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*