ACB ರದ್ದು: ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ.
Cnewstv.in / 23.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ACB ರದ್ದು: ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ.
ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳ(ಸಿಬಿಐ)ವನ್ನು ರದ್ದುಗೊಳಿಸಿ, ಅಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಕನಕರಾಜು ಎಂಬ ವ್ಯಕ್ತಿಯೊಬ್ಬರು ವಕೀಲ ಅಶೋಕ್ ಪಾಣಿಗ್ರಾಹಿ ಅವರ ಮೂಲಕ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಪೀಠದ ಮುಂದೆ ಖಾಸಗಿ ಅರ್ಜಿ ಸಲ್ಲಿಸಿದ್ದಾರೆ. ಶೀಘ್ರವೇ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.
ಇದಕ್ಕೂ ಮುನ್ನ ರಾಜ್ಯ ಸರ್ಕಾರವೇ ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ ಎಂದು ವರದಿಯಾಗಿದೆ. ಆದರೆ ಈ ವಿಚಾರವನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ಖಾಸಗಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಈ ವಿಚಾರದಲ್ಲಿ ಸರ್ಕಾರದ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲಎಸಿಬಿ ರದ್ದು ಮಾಡುವ ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ’ ಎಂದು ಹೇಳಿದ್ದಾರೆ.
ಮಹತ್ವದ ಬೆಳವಣಿಗೆಯಲ್ಲಿ ಹಿಂದಿನ ಸರ್ಕಾರ 2016ರಲ್ಲಿ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ರದ್ದುಗೊಳಿಸಿದೆ, ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ.
ಇದನ್ನು ಒದಿ : https://cnewstv.in/?p=10930
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ACB ರದ್ದು: ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ. 2022-08-23