Breaking News

ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಬೆದರಿಕೆ ಪತ್ರ.

Cnewstv.in / 24.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಬೆದರಿಕೆ ಪತ್ರ.

ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಬೆದರಿಕೆ ಪತ್ರವೊಂದು ಬಂದಿದ್ದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಮುಸ್ಲಿಂ ಗೂಂಡ ಎಂಬ ಹೇಳಿಕೆ ನೀಡಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪನವರ ನಾಲಿಕೆ ಕಟ್ ಮಾಡುವುದಾಗಿ ಬೆದರಿಕೆ ಪತ್ರವೊಂದನ್ನು ಅವರ ಮನೆಗೆ ಕಳುಹಿಸಲಾಗಿದೆ.

ಬೆದರಿಕೆ ಪತ್ರದಲ್ಲಿ..

“ನಮ್ಮ ಸ್ವಾತಂತ್ರ್ಯ ಸೇನಾನಿ ಟಿಪ್ಪುಸುಲ್ತಾನ್ ಬಗ್ಗೆ ಮುಸ್ಲಿಂ ಗೂಂಡಾ ಎಂದು ಹೇಳಿದ್ದೆಯಲ್ಲ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೊಟ್ಟೆಬೆನ್ನೂರಿನ ಕಾಲೇಜು ಕಟ್ಟಡ ಕಟ್ಟಲು ನಮ್ಮ ಮುಸ್ಲಿಂ ಸಿಮೆಂಟ್ ಬ್ರಿಕ್ಸ್ ಬೇಕು ನಿನಗೆ ಆದರೆ ನಿನಗೆ ಮುಸ್ಲಿಮರು ಬೇಡ ನಾಚಿಕೆಯಾಗಬೇಕು. ನಾಲಿಗೆ ಕಟ್ ಮಾಡುತ್ತೇವೆ ಹುಷಾರ್ ಬಾಲಾ ಬಿಚ್ಚಬೇಡ.”

ಈಶ್ವರಪ್ಪನವರ ಆಪ್ತ ಸಹಾಯಕರಿಂದ ಶಿವಮೊಗ್ಗದ ರಕ್ಷಣಾಧಿಕಾರಿಗಳಿಗೆ ಪತ್ರದ ಮೂಲಕ ದೂರು ನೀಡಲಾಗಿದೆ.‌ ಈ ಹಿಂದೆಯೂ ಸಹ ಈಶ್ವರಪ್ಪನವರಿಗೆ ಬೆದರಿಕೆ ಕರೆ ಬಂದಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದ್ದು ಅದಾಗಿಯೂ ಇದೀಗ ಮತ್ತೊಮ್ಮೆ ಈ ರೀತಿ ಅನಾಮದೇಯ ಪತ್ರದ ಮೂಲಕ ಮಾಜಿ ಸಚಿವರಿಗೆ ಬೆದರಿಕೆಯನ್ನು ಹಾಕಲಾಗಿದೆ.

ಇದನ್ನು ಒದಿ : https://cnewstv.in/?p=10962

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*