Cnewstv.in / 25.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಜ್ಯ ಸರ್ಕಾರದ ಎಡವಟ್ಟು – ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ, ಜೀವಂತ ಇಲ್ಲದವರು ಸದಸ್ಯರು.!!!
ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನ ಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿದೆ. ಜೀವಂತ ಇಲ್ಲದವರನ್ನು ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಿ ಮುಜುಗರಕ್ಕೆ ಒಳಗಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ಸರ್ಕಾರ ಬುಧವಾರ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಚಿಕ್ಕಮಗಳೂರಿನ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾಗಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಅವರ ಹೆಸರನ್ನು ಆಯ್ಕೆ ಮಾಡಲಾಗಿದೆ ಆದರೆ ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿಯವರು 2021 ಡಿಸೆಂಬರ್ ತಿಂಗಳಿನಲ್ಲಿ ನಿಧನರಾಗಿದ್ದಾರೆ. ಇದೀಗ ಅವರ ಹೆಸರನ್ನು ಪಟ್ಟಿಯಲ್ಲಿ ಸೇರಿಸಿರುವುದರಿಂದ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾಗುತ್ತಿದೆ.
ಪ್ರತಿಷ್ಠಾನದ ನೂತನ ಅಧ್ಯಕ್ಷರಾಗಿ ನರೇಂದ್ರ ರೈ, ಉಳಿದ ಸದಸ್ಯರಾಗಿ ದೀಪಕ್ ದೊಡ್ಡಯ್ಯ, ಪ್ರಭುಲಿಂಗ ಶಾಸ್ತ್ರಿ, ಶಿವಾನಂದ ಕಾಳವೆ, ವಿನೋದ್ ಕುಮಾರ್ ನಾಯಕ್, ಲಕ್ಷ್ಮೀನಾರಾಯಣ್ ಕಜಗದ್ದೆ, ಶರಾಮ್, ಸದಸ್ಯ ಕಾರ್ಯದರ್ಶಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ನೇಮಕ ಮಾಡಲಾಗಿದೆ.
ಇದನ್ನು ಒದಿ : https://cnewstv.in/?p=10965
Recent Comments