Breaking News

ನಮ್ಮ ಹಬ್ಬ ಇನ್ನೊಬ್ಬರಿಗೆ ಖುಷಿಕೊಡಬೇಕು – ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

Cnewstv.in / 26.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಮ್ಮ ಹಬ್ಬ ಇನ್ನೊಬ್ಬರಿಗೆ ಖುಷಿಕೊಡಬೇಕು – ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

ಶಿವಮೊಗ್ಗ : ನಮ್ಮ ಹಬ್ಬ ಇನ್ನೊಬ್ಬರಿಗೆ ಖುಷಿಕೊಡಬೇಕು ಹೊರತು ನೋವು ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ. ಸೆಲ್ಪಮಣಿ ಹೇಳಿದ್ದಾರೆ. ‌

ಇಂದು ಮೀಡಿಯಾ ಹೌಸ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿ ಗಣೇಶೋತ್ಸವವನ್ನು ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದಾಗಿ ಹಬ್ಬದ ಆಚರಣೆಗಳಲ್ಲಿ ಸಂಭ್ರಮವಿರಲಿಲ್ಲ. ಈ ಬಾರಿ ಎಲ್ಲರೂ ನಿಯಮಾನುಸಾರ ಸಂಭ್ರಮದಿಂದ ಹಬ್ಬವನ್ನು ಆಚರಿಸೋಣ.

ಅನೇಕ ಸಂಘ-ಸಂಸ್ಥೆಗಳು, ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಯನ್ನು ಸಹ ನಡೆಸಲಾಗಿದ್ದು ಪೋಲಿಸ್ ಇಲಾಖೆ ಕೈಗೊಳ್ಳುವ ಎಲ್ಲಾ ಕ್ರಮಗಳಿಗೆ ಜಿಲ್ಲಾಡಳಿತ ಸಹಕಾರ ನೀಡಲಿದೆ. ನಗರದ ಪ್ರಮುಖ ವೃತ್ತಗಳಲ್ಲಿ ಸಿಸಿಟಿವಿ ಅಳವಡಿಕೆ ಹಾಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ವಿಡಿಯೋ ರೆಕಾರ್ಡ್ ಮಾಡಲು ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ ಎಂದರು.

ಇದನ್ನು ಒದಿ : https://cnewstv.in/?p=10976

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*