ರಸ್ತೆ ಅಪಘಾತ, ಮೂರು ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ಮೂವರ ಸಾವು.
Cnewstv.in / 01.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಸ್ತೆ ಅಪಘಾತ, ಮೂರು ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ಮೂವರ ಸಾವು.
ವಿಜಯಪುರ : ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ನೆನ್ನೆ ನಡೆದಿದೆ.
ಸಾರಿಗೆ ಸಂಸ್ಥೆಯ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಮೂವರೂ ಸಾವನ್ನಪ್ಪಿದ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರದ ಕುಪಕಡ್ಡಿ ಬಳಿ ನಡೆದಿದೆ.
ಮೃತರನ್ನು ಕಲಬುರ್ಗಿ ಮೂಲದ ಸುನಂದಾ ಮಲ್ಲಿಕಾರ್ಜುನ ಕಲಶಟ್ಟಿ, ಮಗಳು ಸುಮನ ಮಲ್ಲಿಕಾರ್ಜುನ ಕಲಶಟ್ಟಿ , ಅದೇ ಕುಟುಂಬ ಶರಣಮ್ಮ ಬಸವರಾಜ ಕಲಶಟ್ಟಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಉಮೇಶ ಕಲಶಟ್ಟಿ, ಸುರೇಖಾ ಕಲಶಟ್ಟಿ ಇವರನ್ನು ತುರ್ತು ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಒದಿ : https://cnewstv.in/?p=10996
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಮೂರು ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ಮೂವರ ಸಾವು. ರಸ್ತೆ ಅಪಘಾತ 2022-09-01