Breaking News

ಪೋಕ್ಸೋ ಕಾಯ್ದೆ : ಮುರುಘಾ ಮಠದ ಮುರುಘಾ ಶ್ರೀ ಅರೆಸ್ಟ್

Cnewstv.in / 01.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಪೋಕ್ಸೋ ಕಾಯ್ದೆ : ಮುರುಘಾ ಮಠದ ಮುರುಘಾ ಶ್ರೀ ಅರೆಸ್ಟ್

ಬೆಂಗಳೂರು : ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಈಗ ಬಂಧಿಸಿದ್ದಾರೆ.

ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರುಗಳು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಶ್ರೀಗಳನ್ನು ಬಂಧಿಸಿದ ಪೊಲೀಸರು ಅವರನ್ನು ಠಾಣೆಯತ್ತ ಕರೆದೊಯ್ಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುರುಘಾಮಠದ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಅದಕ್ಕೂ ಮುನ್ನ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ.

ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ.

A-3 ಮಠದ ಉತ್ತರಾಧಿಕಾರಿ (ಬಸವಾದಿತ್ಯ) , A-4 ಮಠದ ಕಾರ್ಯದರ್ಶಿ ಪರಮಶಿವಯ್ಯ, A-5 ವಕೀಲ ಗಂಗಾಧರಯ್ಯ ನಾಪತ್ತೆಯಾಗಿದ್ದಾರೆ. A- 2 ಲೇಡಿ ವಾರ್ಡನ್ ಪೊಲೀಸರ ವಶದಲ್ಲಿದ್ದು, ಪ್ರಸ್ತುತ ಸಾಂತ್ವನ ಕೇಂದ್ರದಲ್ಲಿದ್ದಾರೆ. ಮುರುಘಾಮಠದಲ್ಲೇ ವಾಸ್ತವ್ಯ ಹೂಡಿದ್ದ A-1 ಮುರುಘಾ ಶ್ರೀ ಅವರನ್ನು ಈಗ ಬಂಧಿಸಲಾಗಿದೆ.

ಇದನ್ನು ಒದಿ : https://cnewstv.in/?p=11002

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*