Cnewstv.in / 02.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಪೋಕ್ಸೋ ಕಾಯ್ದೆ : ಮುರುಘಾ ಮಠದ ಮುರುಘಾ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು : ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ರಾತ್ರಿ ಬಂಧಿಸಲಾಗಿತ್ತು.
ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀರವರನ್ನು ಪೊಲೀಸರು ಮಠದ ಒಳಗೆ ಪ್ರವೇಶಿಸಿ, ವಶಕ್ಕೆ ಪಡೆದುಕೊಂಡು ಚಳ್ಳಕೆರೆ ಡಿವೈಎಸ್ಪಿ ಕಚೇರಿಗೆ ಕರೆದೊಯ್ದು ಸುಮಾರು ಎರಡು ತಾಸು ವಿಚಾರಣೆ ನಡೆಸಿದರು.
ಅಲ್ಲಿಂದ ರಾತ್ರಿ 12.30ಕ್ಕೆ ಜಿಲ್ಲಾ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆ ಮಾಡಿಸಲಾಯಿತು. ರಾತ್ರಿ 2.30ಕ್ಕೆ ಪೊಲೀಸರು ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಮುರುಘಾಮಠದ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ವಿಚಾರಣೆಗಾಗಿ ಇಂದು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=11005
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
C News TV Kannada News Online in cnewstv