Cnewstv.in / 03.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬಿಲ್ ಗೇಟ್ಸ್ ಗೆ ಬಾಂಬೆ ಹೈಕೋರ್ಟ್ ನಿಂದ ನೋಟಿಸ್ !!?
ನವದೆಹಲಿ : ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಮತ್ತು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಗೆ ಬಾಂಬೆ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ.
ಕೋವಿಡ್ ಲಸಿಕೆ ಕೋವಿಶೀಲ್ಡ್ ನ ಅಡ್ಡ ಪರಿಣಾಮಗಳಿಂದ ತನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ದಿಲೀಪ್ ಲುನಾವತ್ ಸಲ್ಲಿಸಿದ ಮನವಿಯನ್ನು ಪರಿಗಣಿಸಿರುವ ಬಾಂಬೆ ಹೈಕೋರ್ಟ್ ಈ ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಕೇಳಿದ್ದು,
ನಷ್ಟ ಪರಿಹಾರವಾಗಿ 1000 ಕೋಟಿ ನೀಡಬೇಕು ಎಂದು ಅರ್ಜಿದಾರರು ಆಗ್ರಹಿಸಿದ್ದಾರೆ.
ಭಾರತ ಮತ್ತು ಇತರ ತೃತೀಯ ಜಗತ್ತಿನ ದೇಶಗಳಿಗೆ 100 ಮಿಲಿಯನ್ ಡೋಸ್ ಕೋವಿಶೀಲ್ಡ್ ಲಸಿಕೆಗಳ ತಯಾರಿಕೆ ಮತ್ತು ವಿತರಣೆಯ ಪ್ರಕ್ರಿಯೆಯನ್ನು ವೇಗಗೊಳಿಸಲು, 2020 ರಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ ನೊಂದಿಗೆ ಪಾಲುದಾರಿಕೆಗೆ ಒಳಪಟ್ಟಿತ್ತು.
ಭಾರತದ ಕೇಂದ್ರ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ, ಡ್ರಗ್ ಕಂಟ್ರೋಲರ್ ಜನರಲ್ ಡಾ ವಿಜಿ ಸೋಮಾನಿ ಮತ್ತು ಎಐಐಎಂಎಸ್ ನಿರ್ದೇಶಕ ಡಾ ರಂದೀಪ್ ಗುಲೇರಿಯಾ ಅವರನ್ನು ಅರ್ಜಿಯ ಇತರ ಪ್ರತಿವಾದಿಗಳಾಗಿ ಮಾಡಲಾಗಿದೆ.
ಲಸಿಕೆಗಳ ಅಡ್ಡ ಪರಿಣಾಮಗಳಿಂದ ಸಾವು ಸಂಭವಿಸುವ ಬಗ್ಗೆ ಸರಿಯಾದ ಮಾಹಿತಿಯನ್ನು ಹತ್ತಿಕ್ಕಲು ಸಂಚು ನಡೆಸುತ್ತಿರುವ ಗೂಗಲ್, ಯೂಟ್ಯೂಬ್, ಮೆಟಾ ಮುಂತಾದ ಸಾಮಾಜಿಕ ಮಾಧ್ಯಮ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದಿಲೀಪ್ ಲುನಾವತ್ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.
ಇದನ್ನು ಒದಿ : https://cnewstv.in/?p=11013
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
C News TV Kannada News Online in cnewstv