Cnewstv.in / 03.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಪ್ರಧಾನಿ ನರೇಂದ್ರ ಮೋದಿ ಕನಸು ನನಸು ಮಾಡಲು ಎಲ್ಲಾ ಕಾರ್ಯಕರ್ತರು ನಿರಂತರವಾಗಿ ಶ್ರಮಿಸಬೇಕು – ಬಿ.ಎಸ್. ಯಡಿಯೂರಪ್ಪ
ಶಿವಮೊಗ್ಗ : ಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದು, ಅವರ ಕನಸು ನನಸು ಮಾಡಲು ಎಲ್ಲಾ ಕಾರ್ಯಕರ್ತರು ನಿರಂತರವಾಗಿ ಶ್ರಮಿಸುವಂತೆ ಮಾಜಿ ಸಿಎಂ ಹಾಗೂ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮಂಗಳೂರಿಗೆ ಬಂದಿದ್ದ ಮೋದಿಯವರು ಕೋರ್ ಕಮಿಟಿ ಸಭೆಯಲ್ಲಿ ಸೂಕ್ತ ಸಲಹೆಗಳನ್ನು ನೀಡಿದ್ದಾರೆ. ಪ್ರತೀ ತಿಂಗಳು ರಾಜ್ಯಕ್ಕೆ ಭೇಟಿ ನೀಡಿ ಪ್ರಗತಿಯನ್ನು ಪರಿಶೀಲಿಸಿ ಸಲಹೆ ನೀಡುವುದಾಗಿ ಹೇಳಿದ್ದಾರೆ ಎಂದರು.
ಯುವ ಮೋರ್ಚಾ ಬಲಪಡಿಸಬೇಕು. ಯುವಕರಲ್ಲಿ ಪಕ್ಷದ ಬಗ್ಗೆ ಒಲವು ಬರುವಂತೆ ಕಾರ್ಯಕ್ರಮ ರೂಪಿಸಬೇಕು. ಆ ಮೂಲಕ ಯುವ ಸಮುದಾಯವನ್ನು ಜೋಡಿಸುವಂತೆ ಹೇಳೀದ್ದಾರೆ. ಮಹಿಳಾ ಸಂಘಟನೆಯನ್ನು ಬಲಪಡಿಬೇಕು. ಮಹಿಳೆಯರಿಗೆ ಸೌಲಭ್ಯಗಳನ್ನು ತಲುಪಿಸಬೇಕೆಂದು ಹೇಳಿದ್ದಾರೆ. ಕಳೆದ 8 ವರ್ಷಗಳಲ್ಲಿ ಒಂದು ದಿನವೂ ವಿಶ್ರಾಂತಿ ಪಡೆಯದೆ ಕೆಲಸ ಮಾಡುತ್ತಿರುವ ಪ್ರಧಾನಿ ಇರುವಾಗ ನಾವು ಇನ್ನಷ್ಟು ಹೆಚ್ಚು ಕೆಲಸ ಮಾಡಬೇಕೆಂದು ಕರೆ ನೀಡಿದರು.
ಜಿಲ್ಲೆಯ ಎಲ್ಲಾ ಏಳೂ ಕ್ಷೇತ್ರಗಳಲ್ಲಿಯೂ ಗೆಲ್ಲಬೇಕಿದೆ. ಹಾಲಿ ಶಾಸಕರು ಕ್ಷೇತ್ರದಲ್ಲಿ ಓಡಾಟ ಮಾಡಿ ಸಂಘಟನೆ ಮಾಡಬೇಕು. ಹೇಗೂ ಶಾಸಕನಾಗಿದ್ದೇನೆ ಎಂಬ ಭ್ರಮೆ ಬೇಡ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುವ ಕೆಲಸ ಆಗಬೇಕಿದೆ. ಈ ಬಾರಿ ಭದ್ರಾವತಿ ಕ್ಷೇತ್ರವೂ ಪಕ್ಷದ ಪಾಲಾಗಬೇಕೆಂದು ಹೇಳಿದರು.
ಪ್ರಧಾನಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸೇರಿದಂತೆ ವರಿಷ್ಠರು ಪಕ್ಷದ ದೊಡ್ಡ ಹುದ್ದೆ ನನಗೆ ಕೊಟ್ಟಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಸಂಘಟನೆ ಇನ್ನು ಬಲಗೊಳಿಸಬೇಕಿದೆ. ಎಲ್ಲರೂ ಒಟ್ಟಾಗಿ ಶ್ರಮಿಸಬೇಕಿದೆ. ಪ್ರವಾಸ ಕಾರ್ಯಕ್ರಮ ನಿಶ್ಚಯವಾಗಿದೆ. ಅದರಂತೆ ಎಲ್ಲರೂ ಸಹಕಾರ ನೀಡಬೇಕೆಂದು ಹೇಳಿದರು.
ಇದನ್ನು ಒದಿ : https://cnewstv.in/?p=11021
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
C News TV Kannada News Online in cnewstv