Cnewstv.in / 06.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ..
ಬೆಂಗಳೂರು : ಹೃದಯಾಘಾತದಿಂದ ಅರಣ್ಯ, ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ವಿಧಿವಶರಾಗಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿದ್ದಾಗ ರಾತ್ರಿ 10 ಗಂಟೆಗೆ ಬಾತ್ ರೂಮಿಗೆ ಹೋಗಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದು ಹತ್ತು ನಿಮಿಷವಾದರೂ ಹೊರಗೆ ಬಾರದೇ ಇದ್ದುದರಿಂದ ಆತಂಕಗೊಂಡು ಕುಟುಂಬಸ್ತರು ಬಾಗಿಲು ಬಡಿದು ನೋಡಿದಾಗ ಪ್ರಜ್ಞೆ ಹೀನ ಸ್ಥಿತಿಯಲ್ಲಿ ಇದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಎಂ.ಎಸ್.ರಾಮಯ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ
ವೈದ್ಯರು ನಾಲ್ಕೈದು ಬಾರಿ ಹೃದಯ ತಪಾಸಣೆ ನಡೆಸಿದರೂ ಯಾವುದೇ ಫಲ ನೀಡಿಲ್ಲ. ಉಮೇಶ್ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಸಿಎಂ ಬೊಮ್ಮಾಯಿ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ.
ಇದನ್ನು ಒದಿ : https://cnewstv.in/?p=11054
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
C News TV Kannada News Online in cnewstv