Cnewstv.in / 07.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹೆಂಡತಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಪತಿರಾಯ.
ಶಿವಮೊಗ್ಗ : ಗಂಡ ಹೆಂಡತಿಯ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ ಆದರೆ ಇಲ್ಲಿ ಗಂಡ ಹೆಂಡತಿಯ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಿಯಾಂಕಾ ಲೇಜೌಟ್ ನಲ್ಲಿ ದಿನೇಶ ಮತ್ತು ಮಂಜುಳಾ ನಡುವೆ ಗಲಾಟೆಯಾಗಿದ್ದು, ಈ ಗಲಾಟೆಯೇ ಕೊಲೆಗೆ ಕಾರಣ ಎಂದು ದಿನೇಶ್ ಪೊಲೀಸರಿಗೆ ತಿಳಿಸಿದ್ದಾರೆ.
ಮೆಸ್ಕಾಂ ಉದ್ಯೋಗಿಯಾಗಿರು ದಿನೇಶ್ ತನ್ನ ಪತ್ನಿ ಮಂಜುಳಾ (30) ರವರನ್ನು ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾನೆ ನಂತರ ತಾನೂ ಕೂಡ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನ ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ. ಮಂಜುಳಾ ಅಡುಗೆಮನೆಯಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತ ಮಂಜುಳಾ ಮತ್ತಿಘಟ್ಟದ ನಿವಾಸಿಯಾಗಿದ್ದು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ತುಂಗಾ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಸ್ಪಷ್ಟ ಕಾರಣ ತನಿಖೆಯ ನಂತರ ತಿಳಿದುಬರಬೇಕಿದೆ.
ಇದನ್ನು ಒದಿ : https://cnewstv.in/?p=11061
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
C News TV Kannada News Online in cnewstv