Cnewstv.in / 11.09.2022 / ಮಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಪ್ರವೀಣ್ ನೆಟ್ಟರು ಹತ್ಯಾ ಆರೋಪಿಯ ಸೋದರನಿಂದ ಜೀವ ಬೆದರಿಕೆ ಕರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರಿಯಲ್ಲಿ ಜುಲೈ 26 ರಂದು ನಡೆದ ಪ್ರವೀಣ್ ನೆಟ್ಟರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೋದರನಿಂದ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.
ಪ್ರವೀಣ್ ನೆಟ್ಟರು ಕೊಲೆ ಆರೋಪಿ ಶಫಿಕ್ ಸೋದರ ಶಾಫ್ರಿದ್ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನಂತೆ. ಈ ಸಂಬಂಧ ಬೆಳ್ಳಾರೆ ಗ್ರಾಮದ ಪ್ರಶಾಂತ್ ಪೂಂಜ ಶನಿವಾರ ರಾತ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆದರಿಕೆ ಹಾಕಿದವನ ಬಂಧನಕ್ಕೆ ಆರೋಪಿ ಬೆಳ್ಳಾರೆ ಠಾಣೆ ಎದುರು ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.
ಇದನ್ನು ಒದಿ : https://cnewstv.in/?p=11086
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
C News TV Kannada News Online in cnewstv