Cnewstv.in / 11.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಂದಿನಿ ಹಾಲಿನ ದರದಲ್ಲಿ 3 ರೂ ಏರಿಕೆಗೆ ಕೆಎಂಎಫ್ ನಿರ್ಧಾರ!
ಬೆಂಗಳೂರು : ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 3 ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾಮಂಡಲ (ಕೆಎಂಎಫ್) ನಿರ್ಧರಿಸಲಾಗಿದೆ.
ಕೆಎಂಎಫ್‌ನ ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಮತದ ನಿರ್ಣಯ ಅಂಗೀಕರಿಸಲ್ಪಟ್ಟಿದೆ, ಸಭೆಯಲ್ಲಿ ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ದರ ಏರಿಕೆಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ಕೆಎಂಎಫ್‌ನ ಉನ್ನತ ಮೂಲಗಳು ತಿಳಿಸಿವೆ.
ರಾಜ್ಯದ ಎಲ್ಲಾ ಹಾಲು ಒಕ್ಕೂಟಗಳು ಹಾಲು ಮಾರಾಟ ದರ ಹೆಚ್ಚಿಸುವಂತೆ ಕಳೆದ 8 ತಿಂಗಳಿನಿಂದ ಕೆಎಂಎಫ್‌ನ ಮೇಲೆ ಒತ್ತಡ ಹೇರುತ್ತಿದೆ. ಈ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಮುಖ್ಯಮಂತ್ರಿಗಳಿಗೆ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ರೈತರ ಅನುಕೂಲಕ್ಕಾಗಿ ಶೀಘ್ರವೇ ಹಾಲು ಮಾರಾಟ ದರದಲ್ಲಿ ಲೀಟರ್‌ಗೆ 3 ರೂ. ಹೊಸದಾಗಿ ಮಾಡಲೇಬೇಕು. ಬೆಲೆ ಹೆಚ್ಚಳದ ಸಂಪೂರ್ಣ ಲಾಭವನ್ನು ರೈತರಿಗೆ ತಲುಪಿಸುವ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ಹೇಳಿವೆ. ಈ ಕುರಿತು ಸರ್ಕಾರದ ಅನುಮತಿ ಬಾಕಿ ಇದೆ.
ಇದನ್ನು ಒದಿ : https://cnewstv.in/?p=11091
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
C News TV Kannada News Online in cnewstv