Breaking News

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ, ಕಾಲು ಜಾರಿ ಬಿದ್ದು ತಂದೆ ಮಗನ ಸಾವು.

Cnewstv.in / 13.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ, ಕಾಲು ಜಾರಿ ಬಿದ್ದು ತಂದೆ ಮಗನ ಸಾವು.

ಶಿವಮೊಗ್ಗ : ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂ ನಿಂದ ಕೆಳಗೆ ಬಿದ್ದು ತಂದೆ ಮಗು ಸಾವನ್ನಪ್ಪಿದ ಘಟನೆ ಭದ್ರಾವತಿಯಲ್ಲಿ ನಡೆದಿದೆ.

ಮೃತರನ್ನು ಮೋಹನ್ ಪ್ರಸಾದ್ (70) ಹಾಗೂ ಅಮರ್ ನಾಥ್ (31) ಎಂದು ಗುರುತಿಸಲಾಗಿದೆ. ತಾಳಗುಪ್ಪ -ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ರೈಲಿನ ಮುಖಾಂತರ ಬೆಂಗಳೂರಿಗೆ ಹೊರಟಿದ್ದರು ಆದರೆ ಅವರು ನಿಲ್ದಾಣಕ್ಕೆ ಬಂದಾಗ ರೈಲು ಹೊರಟಿತು, ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಮಗ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ ಆತನ ರಕ್ಷಣೆಗೆ ಮುಂದಾದ ತಂದೆ ಕೂಡ ರೈಲ್ವೆ ಅಡಿಯಲ್ಲಿ ಸಿಲುಕಿದ್ದಾರೆ.

ತಲೆಗೆ ತೀವ್ರವಾದ ಗಾಯವಾದ ಕಾರಣ ತಂದೆ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮಗನನ್ನ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂಧ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಒದಿ : https://cnewstv.in/?p=11096

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*