Cnewstv.in / 14.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ದಸರಾ ಕ್ರೀಡಾಕೂಟದ ಸ್ಪರ್ಧೆಗಳು..
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 10 ಗಂಟೆಗೆ 2022-23 ನೇ ಸಾಲಿನ ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಈ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್, ವಾಲಿಬಾಲ್, ಖೋ-ಖೋ, ಫುಟ್ಬಾಲ್, ಥ್ರೋಬಾಲ್ ಕ್ರೀಡೆಗಳನ್ನು ನಡೆಸಲಾಗುವುದು. ಜಿಲ್ಲೆಯ 7 ತಾಲ್ಲೂಕುಗಳಲ್ಲಿ ನಡೆಸಲಾದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ.
ಅರ್ಹತೆ ಪಡೆದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಸೆ.15 ರಂದು ಬೆಳಿಗ್ಗೆ 9 ಗಂಟೆಯೊಳಗಾಗಿ ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇಲ್ಲಿ ವರದಿ ಮಾಡಿಕೊಂಡು ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=11104
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
C News TV Kannada News Online in cnewstv