Breaking News

ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ.

Cnewstv.in /20.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ.

ಬೆಂಗಳೂರು : ಮಾಜಿ ಮುಖ್ಯ ಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಸೋಮವಾರ ಅಧಿವೇಶನ ಮುಗಿದ ಬಳಿಕ ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿದ ಅವರು ಗೌಡರ ಜತೆ ಸ್ವಲ್ಪ ಹೊತ್ತು ಸಮಯ ಕಳೆದರು. ಹಲವು ಬಾರಿ ದೇವೇಗೌಡರ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದರು. ಆದರೆ ಆರು ವರ್ಷಗಳಿಂದ ಮನೆಗೆ ಭೇಟಿ ನೀಡಿಲ್ಲ. ಇಂದು ಅವರ ಆರೋಗ್ಯ ವಿಚಾರಿಸಲೆಂದೇ ದೇವೇಗೌಡರ ಮನೆಗೆ ಭೇಟಿ ನೀಡಿದರು.

ಮಾಜಿ ಪ್ರಧಾನಿ ದೇವೇಗೌಡರನ್ನು ಇಂದು ಅವರ ನಿವಾಸಕ್ಕೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ. ಬಹಳ ದಿನಗಳ ನಂತರ ದೇವೇಗೌಡರನ್ನು ಭೇಟಿಯಾದದ್ದು ಸಂತೋಷವಾಯಿತು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದನ್ನು ಒದಿ : https://cnewstv.in/?p=11128

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*