Cnewstv.in /21.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬೆಳ್ಳಂಬೆಳಗ್ಗೆ ಫ್ರೀಡಂ ಪಾರ್ಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಾಗರೀಕರೊಂದಿಗೆ ಚರ್ಚೆ ನಡೆಸಿದ – ಸಂಸದ ಬಿ.ವೈ.ರಾಘವೇಂದ್ರ.
ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರ ಇಂದು ಬೆಳಿಗ್ಗೆ ಅಧಿಕಾರಿಗಳೊಂದಿಗೆ ಫ್ರೀಡಂ ಪಾರ್ಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಾಗರೀಕರೊಂದಿಗೆ ಚರ್ಚೆ ನಡೆಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಸುಮಾರು 20 ಕೋಟಿ ರೂ ವೆಚ್ಚದಲ್ಲಿ ಫ್ರೀಡಂ ಪಾರ್ಕನ್ನು ( ಹಳೇ ಜೈಲು ಮೈದಾನ) ಅಭಿವೃದ್ಧಿಗೊಳಿಸಲಾಗುವುದು ಎಂದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಸಹಕಾರದಿಂದ 45 ಎಕರೆಯ ಈ ಜಾಗವನ್ನು ಸಂರಕ್ಷಣೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಅಭಿವೃದ್ಧಿಗೊಳಿಸಲಾಗುತ್ತಿದೆ.
ಈ ಪಾರ್ಕನ್ನು ಪರಂಪರೆಯ ಉಳಿವು ಮತ್ತು ಮೂಲಭೂತ ಸೌಲಭ್ಯಗಳ ಕಲ್ಪಿಸಿ, ಮತ್ತಷ್ಟು ಉನ್ನತ ಮಟ್ಟದಲ್ಲಿ ಸಾರ್ವಜನಿಕರ ಸೇವೆಗೆ ನೀಡುವ ಉದ್ದೇಶದಿಂದ ಸುಮಾರು 20 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ನಿರ್ಧರಿಸಲಾಗಿದೆ ಎಂದರು. ಈಗಾಗಲೇ ಮಹಾನಗರ ಪಾಲಿಕೆ ,ಸ್ಮಾರ್ಟ್ ಸಿಟಿ, ಜನಪ್ರತಿನಿಧಿಗಳ ಸಹಕಾರದಲ್ಲಿ ಈ ಜಾಗವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ಹಿನ್ನೆಲೆಯಲ್ಲಿ ಚರ್ಚಿಸಲಾಗಿದೆ.
ಸ್ಮಾರ್ಟ್ ಸಿಟಿಯಿಂದ ಐದು ಜೋನ್ ಗಳಲ್ಲಿ ಅಭಿವೃದ್ಧಿ ಕಾಮಗಾರಿ ಈಗಾಗಲೇ ಆರಂಭಿಸಲಾಗಿದೆ. ನಾಲ್ಕನೇ ಜೋನಿನ ಕೆಲಸಗಳು ತ್ವರಿತ ಗತಿಯಲ್ಲಿ ನಡೆದಿದೆ. ವಾಕಿಂಗ್ ಟ್ರ್ಯಾಕ್ ಈಗಾಗಲೇ ನಿರ್ಮಾಣವಾಗಿದೆ. ಹಾಗೆಯೇ ಜೋನ್ ಒಂದು ಮತ್ತು ಎರಡರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ ಇದಕ್ಕಾಗಿ ಸುಮಾರು ಐದು ಕೋಟಿ ರೂ ವೆಚ್ಚವಾಗುವ ನೀರಿಕ್ಷೆ ಇದೆ ಎಂದರು. ಒಟ್ಟಾರೆ ಈ ಜಾಗದ ಅಭಿವೃದ್ಧಿ ಆರಂಭವಾಗಿದೆ. ಸಾವಿರಾರು ಜನರು ಇಲ್ಲಿಗೆ ಬರುತ್ತಾರೆ. ಹಾಗಾಗಿ ಭದ್ರತೆಯನ್ನು ನೀಡಲಾಗುವುದು, ಮೂಲಭೂತ ಸೌಲಭ್ಯಗಳ ಜೊತೆಗೆ ಗೋಡೆ ಸೇರಿದಂತೆ ಅಗತ್ಯ ಕ್ರಮಗಳ ಕೈಗೊಂಡು ಸಾರ್ವಜನಿಕರ ಸೇವೆಗೆ ನೀಡಲಾಗುವುದು ಎಂದರು.
ಇದನ್ನು ಒದಿ : https://cnewstv.in/?p=11143
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
Recent Comments