Breaking News

ಕೊಯಂಬತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ. ಕಾರ್ಯಕರ್ತರಿಂದ ಪ್ರತಿಭಟನೆ. 

Cnewstv.in / 23.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 

ಕೊಯಂಬತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ. ಕಾರ್ಯಕರ್ತರಿಂದ ಪ್ರತಿಭಟನೆ. 

ಕೊಯಂಬತ್ತೂರು : ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಜಂಟಿಯಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿದ ಘಟನೆ ಬೆನ್ನಲ್ಲೇ ಭಾರತೀಯ ಜನತಾ ಪಕ್ಷದ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ಘಟನೆ ಕೊಯಂಬತ್ತೂರ್ ನಲ್ಲಿ  ನಡೆದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಕಾರ್ಯಕರ್ತ ನಂದಕುಮಾರ್, “ನಮ್ಮ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.  ಭಯೋತ್ಪಾದಕ ದಾಳಿಗಳು ಸಹ ಹೀಗೆ ನಡೆಯುತ್ತಿದೆ. ಇಂದು ಪಿಎಫ್ ಐನ ಹಲವು ಕಚೇರಿಗಳ ಮೇಲೆ ಎನ್ ಐಎ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. 

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಗರ ಪೊಲೀಸ್ ಆಯುಕ್ತ ವಿ ಬಾಲಕೃಷ್ಣನ್ ಮತ್ತಿತರರು ಸ್ಥಳಕ್ಕೆ ಧಾವಿಸಿದ್ದು, ಅಪರಿಚಿತ ವ್ಯಕ್ತಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ದುಷ್ಕರ್ಮಿಗಳನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳ ಲಭ್ಯತೆಯನ್ನು ಪರಿಶೀಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=11156

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*