Breaking News

ಮಾಜಿ ಪ್ರಧಾನಿ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

Cnewstv.in / 2.10.2022/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಮಾಜಿ ಪ್ರಧಾನಿ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ಇಸ್ಲಾಮಾಬಾದ್: ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಪಾಕಿಸ್ಥಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಜಾರಿಯಾಗಿದೆ.

ಇಸ್ಲಾಮಾಬಾದ್‌ನ ಜಿಸ್ಟ್ ಅವರು ತಹ್ರಿಕ್-ಎ-ಇನ್ಸಾಫ್ ನಾಯಕ ಇಮ್ರಾನ್ ಖಾನ್‌ಗೆ ಸೆಪ್ಟೆಂಬರ್ 30 ರಂದು ಬಂಧನ ವಾರಂಟ್ ಹೊರಡಿಸಿದ್ದು, ಇಮ್ರಾನ್ ಖಾನ್ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ಸಿವಿಲ್ ನ್ಯಾಯಾಧೀಶ ರಾಣಾ ಮುಜಾಹಿದ್ ರಹೀಮ್ ಅವರು ವಾರಂಟ್ ಹೊರಡಿಸಿದ್ದಾರೆ. ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಇಸ್ಲಾಮಾಬಾದ್‌ನಲ್ಲಿ 20 ನೇ ಆಗಸ್ಟ್ 2022 ರಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಝೆಬಾ ಚೌಧರಿ ಅವರಿಗೆ ಬೆದರಿಕೆ ಹಾಕಿದ ಆರೋಪ ಇಮ್ರಾನ್ ಖಾನ್ ಮೇಲಿದೆ. ಅವರ ಹೇಳಿಕೆಗಳ ನಂತರ, ಆಗಸ್ಟ್ 20 ರಂದು ಅವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.

ಇದನ್ನು ಓದಿ : http://cnewstv.in/?p=11166

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*