Cnewstv.in / 07.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.
ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಸುವ 110/11 ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಕೆಳಕಂಡ ಗ್ರಾಮಗಳಲ್ಲಿ ಅಕ್ಟೋಬರ್ 08 ಮತ್ತು 09 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಇನ್ನಿತರ ಸುತ್ತಮುತ್ತ ಹಳ್ಳಿಗಳು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತಲ ಗ್ರಾಮಗಳು ಹಾಗೂ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನು ಓದಿ :
http://cnewstv.in/?p=11205
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.