Breaking News

ಒಂದು ಗಂಟೆ ತಡವಾಗಿ ಆರಂಭವಾದ ಭಾರತ್ ಜೋಡೋ ಯಾತ್ರೆ

Cnewstv.in / 11.10.2022/ ಚಿತ್ರದುರ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಒಂದು ಗಂಟೆ ತಡವಾಗಿ ಆರಂಭವಾದ ಭಾರತ್ ಜೋಡೋ ಯಾತ್ರೆ

ಚಿತ್ರದುರ್ಗ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ 12ನೇ ದಿನದ ಪಾದಯಾತ್ರೆ ಒಂದು ಗಂಟೆ ತಡವಾಗಿ ಪ್ರಾರಂಭವಾಯಿತು. ಬೆಳಗ್ಗೆ 6.30ಕ್ಕೆ ಆರಂಭವಾದ ಯಾತ್ರೆ ಮಂಗಳವಾರ ಬೆಳಗ್ಗೆ 7.30ಕ್ಕೆ ಪ್ರಾರಂಭವಾಯಿತು.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ದಿನ ಬೆಳಗ್ಗೆ 6 ಗಂಟೆಗೆ ಭಾರತ ಐಕ್ಯತಾ ಯಾತ್ರೆ ಆರಂಭವಾಗಿದೆ. ಮಳೆ ಕಾರಣಕ್ಕೆ ತಡವಾಗಿದೆ. ಈ ಕುರಿತು ರಾತ್ರಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಹಿರಿಯೂರು ತಾಲೂಕಿನ ಹರ್ತಿಕೋಟೆ ಗ್ರಾಮದಿಂದ ಆರಂಭವಾದ ಪಾದಯಾತ್ರೆ ಚಳ್ಳಕೆರೆ ತಾಲೂಕಿನ ಸಾಣಿಕೆರೆವರೆಗೆ ಸಾಗಲಿದೆ. ಬೆಳಿಗ್ಗೆ 11 ಗಂಟೆಯವರೆಗೆ ಹೆಜ್ಜೆ ಹಾಕುವ ಯಾತ್ರಾರ್ಥಿಗಳು ನಂತರ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ 4ಕ್ಕೆ ಪುನರಾರಂಭವಾಗುವ ಯಾತ್ರೆ ರಾತ್ರಿ ಚಳ್ಳಕೆರೆ ತಲುಪಲಿದೆ.

ಹಿರಿಯೂರು ನಗರದಿಂದ ಬಾಳೇನಹಳ್ಳಿವರೆಗೆ ಸೋಮವಾರ ನಡೆದ ಪಾದಯಾತ್ರೆ ರಾತ್ರಿ ಹರ್ತಿಕೋಟೆ ಗ್ರಾಮದಲ್ಲಿ ವಾಸ್ತವ್ಯ ಹೂಡಿತ್ತು. ಪಾದಯಾತ್ರೆ ಮುಗಿದ ಬಳಿಕ ಆರಂಭವಾದ ಮಳೆ ರಾತ್ರಿ ಇಡೀ ಸುರಿದಿತ್ತು. ನಸುಕಿನ 6 ಗಂಟೆಗೆ ಮಳೆ ಬಿಡುವು ನೀಡಿದ್ದು, ಪಾದಯಾತ್ರೆ ಆರಂಭವಾಯಿತು. ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ‘150-ಎ’ನಲ್ಲಿ ಚಳ್ಳಕೆರೆ ಮತ್ತು ಹಿರಿಯೂರು ನಡುವೆ ಸಾಗುತ್ತಿದೆ.

ಇದನ್ನು ಓದಿ :

http://cnewstv.in/?p=11217

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*