24 ಗಂಟೆಗಳಲ್ಲಿ ಎಫ್‌ಐಆರ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು.
Cnewstv.in / 12.10.2022/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
24 ಗಂಟೆಗಳಲ್ಲಿ ಎಫ್‌ಐಆರ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು.
ಬೆಂಗಳೂರು: “ಪ್ರಥಮ ವರ್ತಮಾನ ವರದಿ’ (ಎಫ್‌ಐಆರ್) ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಹಾಕಲು ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ಈ ವಿಚಾರವಾಗಿ ವಕೀಲ ಎಸ್. ಉಮಾಪತಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕಾಯುಕ್ತ ಎಡಿಜಿಪಿ ಅವರಿಗೆ ಅರ್ಜಿ ಸಲ್ಲಿಸಲಾಗಿದೆ. ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದಕ್ಕೆ ಸಂಬಂಧಿಸಿದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು 2016ರಲ್ಲಿ ಪ್ರಕಟಣೆ ಹೊರಡಿಸಿದೆ. ಇದನ್ನು ಸೇರಿದಂತೆ ಉಳಿದ ತನಿಖಾ ಸಂಸ್ಥೆಗಳು ಪಾಲಿಸುತ್ತಿವೆ. ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ 2018ರಲ್ಲಿ ಎಸಿಬಿ ಮತ್ತು ಬಿಎಂಟಿಎಫ್‌ಗೆ ಆದೇಶ ನೀಡಿದೆ. ಅದನ್ನು ಎಸಿಬಿ ಪಾಲಿಸುತ್ತಾ ಬಂದಿತ್ತು.
ಈ ಮಧ್ಯೆ, ಎಸಿಬಿಯನ್ನು ರದ್ದುಗೊಳಿಸಿ 2022ರ ಆ.11ರಂದು ತೀರ್ಪು ನೀಡಿದ ಆದೇಶ, ಲೋಕಾಯುಕ್ತದ ಅಧಿಕಾರವನ್ನು ಮರುಸ್ಥಾಪಿಸಲಾಗಿದೆ. ಆದರೆ, ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಆದೇಶವನ್ನು ಲೋಕಾಯುಕ್ತವಾಗಿ ಪಾಲಿಸುತ್ತಿಲ್ಲ. ಇದರಿಂದ ಮುಂದಿನ ಕಾನೂನು ಪ್ರಕ್ರಿಯೆಗೆ ದೂರುದಾರರು, ಕಕ್ಷಿದಾರರು ಮತ್ತು ವಕೀಲರಿಗೆ ಸಾಕಷ್ಟು ತೊಂದರೆಯಾಗುತ್ತಿದೆ.
ಈ ಬಗ್ಗೆ ಅರ್ಜಿದಾರರು 2022ರ ಸೆ.19ರಂದು ದೂರು ನೀಡಿದರೂ ಯಾವುದೇ ಕ್ರಮ ಆಗಿಲ್ಲ ಎಂದು ಅರ್ಜಿ ಸಲ್ಲಿಸಲಾಗಿದೆ. ಆದ್ದರಿಂದ ಎಫ್‌ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಲೋಕಾಯುಕ್ತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಇದನ್ನು ಓದಿ :
http://cnewstv.in/?p=11224
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
24 ಗಂಟೆಗಳಲ್ಲಿ ಎಫ್‌ಐಆರ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. 2022-10-12
Recent Comments