Cnewstv.in / 13.10.2022/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಹಿಜಾಬ್ : ವಿಭಿನ್ನ ತೀರ್ಪು ನೀಡಿದ ಸುಪ್ರೀಂ ನ್ಯಾಯಮೂರ್ತಿಗಳು.
ನವಂಬರ್ : ಪ್ರಪಂಚದಾದ್ಯಂತ ಗಮನ ಸೆಳೆದಿದ್ದ ಕರ್ನಾಟಕ ಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸರ್ವೋಚ್ಛ ನ್ಯಾಯಾಲಯವು ಇಂದು ಐತಿಹಾಸಿಕ ತೀರ್ಪು ನೀಡಿದೆ.
ಹಿಬಾಜ್ ತೀರ್ಪಿನ ಬಗ್ಗೆ ನ್ಯಾಯಮೂರ್ತಿಗಳಲ್ಲೇ ವಿಭಿನ್ನ ಅಭಿಪ್ರಾಯವಿದೆ. ನ್ಯಾ| ಹೇಮಂತ್ ಗುಪ್ತಾ ಅವರು ಮುಸ್ಲಿಂ ವಿದ್ಯಾರ್ಥಿನಿಯರ ಅರ್ಜಿಯನ್ನು ವಜಾ ಮಾಡಿ, ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದರು. ಆದರೆ ನ್ಯಾ| ಸುಧಾಂಶು ಧುಲಿಯಾ ಅವರು ಕರ್ನಾಟಕ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ್ದಾರೆ. ಹೀಗಾಗಿ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಲಾಗಿದೆ.
ನ್ಯಾ| ಹೇಮಂತ್ ಗುಪ್ತಾ ಮತ್ತು ನ್ಯಾ| ಸುಧಾಂಶು ಧುಲಿಯಾ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿ ತೀರ್ಪನ್ನು ಕಾದಿರಿಸಿತ್ತು. ಈ ಪ್ರಕರಣದಲ್ಲಿ 10 ದಿನಗಳ ಕಾಲ ನಡೆದಿದ್ದು, ಅರ್ಜಿದಾರರ ಪರ 21 ವಕೀಲರು ಮತ್ತು ಪ್ರತಿವಾದಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಕರ್ನಾಟಕ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದ್ದರು.
ಶಿಕ್ಷಣ ಸಂಸ್ಥೆಗಳು ಸೂಚಿಸಿದ ಸಮವಸ್ತ್ರವನ್ನೇ ವಿದ್ಯಾರ್ಥಿಗಳು ಧರಿಸಬೇಕು ಎಂಬ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವಾರು ಅರ್ಜಿಗಳ ವಿಚಾರಣೆಯನ್ನು ಕೋರ್ಟ್ ನಡೆಸಿದೆ.
“ಸರ್ಕಾರಿ ಅಧಿಕಾರಿಗಳು ಮಲತಾಯಿ ವರ್ತನೆಯ ವಿದ್ಯಾರ್ಥಿಗಳ ಸಂಪ್ರದಾಯದ ಆಚರಣೆಯನ್ನು ತಡೆಯುತ್ತದೆ, ಜೊತೆಗೆ ಅನಪೇಕ್ಷಿತಭಂಗ ಪರಿಸ್ಥಿತಿಗೆ ಕಾರಣವಾಗಿದೆ” ಎಂದೂ ಅರ್ಜಿ ಸಲ್ಲಿಸಲಾಗಿದೆ
ಇದನ್ನು ಓದಿ :
http://cnewstv.in/?p=11228
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments