ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ರಿಷಬ್ ಶೆಟ್ಟಿ ಜೊತೆ ಕಾಂತಾರ ಸಿನಿಮಾ ವೀಕ್ಷಣೆ ??

Cnewstv.in / 20.10.2022/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ರಿಷಬ್ ಶೆಟ್ಟಿ ಜೊತೆ ಕಾಂತಾರ ಸಿನಿಮಾ ವೀಕ್ಷಣೆ ??

ಬೆಂಗಳೂರು : ಕಾಂತಾರ ಸಿನಿಮಾ ಇದೀಗ ಎಲ್ಲೆಡೆ ಸದ್ದು ಮಾಡಿದೆ. ಕರಾವಳಿ ಭಾಗದ ಸಂಸ್ಕೃತಿ, ನಂಬಿಕೆ ತಿಳಿಸು ಸಿನಿಮಾ ಇದಾಗಿದ್ದು ಎಲ್ಲರ ಮೆಚ್ಚುಗೆಯನ್ನು ಪಡೆದಿದೆ. ಅಲ್ಲದೇ ಬಾಕ್ಸಾಫೀಸಿನಲ್ಲಿ ಈಗಾಗಲೇ 150 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ.

ಸಿನಿಮಾ ನೋಡಿದ ಪ್ರೇಕ್ಷಕರು ಮೂಕವಿಸ್ಮಿತರಾಗಿದ್ದಾರೆ ಭಾರತೀಯ ಚಿತ್ರರಂಗದ ಅತ್ಯುತ್ತಮ ಚಿತ್ರಗಳಲ್ಲಿ ಇದು ಕೂಡ ಒಂದಾಗಿದೆ.‌ ಕಾಂತಾರ ಸಿನಿಮಾ ಬಿಡುಗಡೆಯಾದ ಎಲ್ಲಾ ಭಾಷೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದಿದೆ. ‌ ತೆಲುಗಿನಲ್ಲಿ 16 ಕೋಟಿ ರೂಪಾಯಿ ಕಲೆಕ್ಷನ್ ಅಗಿದೆ. ಹಿಂದಿ ಭಾಷೆಯಲ್ಲೂ ಸಹ ಉತ್ತಮ ಕಲೆಕ್ಷನ್ ಮಾಡುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಿಷನ್ ಶೆಟ್ಟಿ ಜೊತೆ ಕುಳಿತು ಕಾಂತಾರ ಸಿನಿಮಾವನ್ನು ನವೆಂಬರ್ 14 ರಂದು ಬೆಂಗಳೂರಿನಲ್ಲಿ ವೀಕ್ಷಣೆ ಮಾಡಲಿದ್ದಾರೆ ಇದಕ್ಕಾಗಿ ಸಖಲ ಸಿದ್ಧತೆಗಳು ಸಜ್ಜಾಗುತ್ತಿದೆ ಎಂಬ ಸುದ್ದಿ ಇದೀಗ ಎಲ್ಲೆಡೆ ವೈರಲ್ ಆಗಿದೆ.‌ ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಚಿತ್ರತಂಡ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಆದರೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಈ ಸುದ್ದಿ ಎಲ್ಲೆಡೆ ವೈರಲ್ ಆಗಿದೆ.

ಇದನ್ನು ಓದಿ :

http://cnewstv.in/?p=11275

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*